ಸುದ್ದಿಒನ್, ಚಿತ್ರದುರ್ಗ, ಜನವರಿ. 05 : ನಗರದ ಜೆಸಿಆರ್ ಬಡಾವಣೆಯ ಒಂದನೇ ಕ್ರಾಸ್ ನಿವಾಸಿ ನಿವೃತ್ತ ಕೆಇಬಿ ಎಂಜಿನಿಯರ್ ಉತ್ತಾನಪಾದ ರೆಡ್ಡಿ (85 ವರ್ಷ) ಇಂದು (ಜನವರಿ.05) ಸಂಜೆ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಜನವರಿ. 06) ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಮಧ್ಯಾನ್ಹ 2 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ನಿಧನಕ್ಕೆ ಕೆಇಬಿ ನಿವೃತ್ತ ನೌಕರರ ಸಂಘ, ಜೆಸಿಆರ್ ಮತ್ತು ವಿಪಿ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






