Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಸ್ವಂತ ಖರ್ಚಿನಲ್ಲಿ ರಸ್ತೆ ಗುಂಡಿ ಮುಚ್ಚಿ ಮಾದರಿಯಾದ ಚಿತ್ರದುರ್ಗ ವಾಸವಿ ಕ್ಲಬ್ ಕಾರ್ಯಕರ್ತರು

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 08 : ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಬಿ.ಡಿ. ರಸ್ತೆಯಿಂದ ವಾಸವಿ ಮಹಲ್ ರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ತಿರುವಿನಲ್ಲಿದ್ದ ಅಪಾಯಕಾರಿ ಗುಂಡಿಯನ್ನು ವಾಸವಿ ಕ್ಲಬ್ನ ಕಾರ್ಯಕರ್ತರು ತಮ್ಮ ಸ್ವಂತ ಹಣದಿಂದ ಕಾಂಕ್ರೀಟ್ ಹಾಕಿ ಮುಚ್ಚುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಚಿತ್ರದುರ್ಗದ ವಾಸವಿ ಮಹಲ್ ರಸ್ತೆಯ ತಿರುವಿನಲ್ಲಿ ಬೃಹತ್ ಗುಂಡಿ ನಿರ್ಮಾಣವಾಗಿ ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಸದಾ ವಾಹನ ದಟ್ಟಣೆಯಿಂದ ಕೂಡಿರುವ ಈ ಜಾಗದಲ್ಲಿ ಅಪಘಾತಗಳು ಸಂಭವಿಸುವ ಭೀತಿ ಎದುರಾಗಿತ್ತು. ಈ ಬಗ್ಗೆ ನಗರಸಭೆಗೆ ಹಲವು ಬಾರಿ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ.

ವಾಸವಿ ಕ್ಲಬ್ ಸದಸ್ಯರು, ಸ್ವತಃ ತಾವೇ ಹಣ ಒಟ್ಟುಗೂಡಿಸಿ ಗುಂಡಿಗೆ ಕಾಂಕ್ರೀಟ್ ಹಾಕಿ ದುರಸ್ತಿ ಕಾರ್ಯ ಪೂರ್ಣಗೊಳಿಸಿದರು. ಕಾರ್ಯಕರ್ತರ ಜನಪರ ಕಾಳಜಿಗೆ ಸ್ಥಳೀಯ ಅಂಗಡಿಕಾರರು, ದಾರಿಹೋಕರು ಮತ್ತು ಸಾರ್ವಜನಿಕರು ಮುಕ್ತಕಂಠದಿಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now