ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 ; ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ತಾಳ್ ವಾಸುದೇವ ರೆಡ್ಡಿ (75 ವರ್ಷ) ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ನಿಧನರಾದರು. ಮೃತರು ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಗ್ರಾಮದ ಮುಕ್ತಿಧಾಮದಲ್ಲಿ ಇಂದು ಸಂಜೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


















