ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 16 : ಉಮಾಶಂಕರ್ ಎಲೆಕ್ಟ್ರಿಕಲ್ಸ್ ಮಾಲೀಕ ಪಿ.ಸಿ.ವೀರಣ್ಣ ಪಟ್ಟಣಶೆಟ್ಟಿ(70) ಸೋಮವಾರ ಬೆಳಗಿನ ಜಾವ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಮೃತರು ಸಹೋದರ, ಸಹೋದರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಮೃತರ ಅಂತ್ಯ ಸಂಸ್ಕಾರ ಸೋಮವಾರ ಸಂಜೆ ನಡೆಯಿತೆಂದು ಕುಟುಂಬದವರು ತಿಳಿಸಿದ್ದಾರೆ.



