ಚಿತ್ರದುರ್ಗ, (ನವೆಂಬರ್.23) : ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ-2022ರ ಸಂಬಂಧ ನವೆಂಬರ್ 08 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ನಿಮ್ಮ ಹೆಸರು ಮತದಾರರಪಟ್ಟಿಯಲ್ಲಿದೆಯೆ ಎಂದು ಪರಿಶೀಲನೆಗೆ ಲಿಂಕ್ http://electoralsearch.in–(Search your Name- ನಿಮ್ಮ ಹೆಸರನ್ನು ಹುಡುಕಿರಿ) ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲವಾದಲ್ಲಿ ನ್ಯಾಷನಲ್ ವೋಟರ್ಸ್ ಸರ್ವಿಸ್ ಪೋರ್ಟ್‍ಲ್, ವೋಟರ್ ಪೋರ್ಟ್‍ಲ್ ಅಥವಾ ವೋಟರ್ ಹೆಲ್ಪ್‍ಲೈನ್ ಆಪ್‍ನಲ್ಲಿ ನೊಂದಾಯಿಸಿದ ನಂತರ ನಮೂನೆ-6ನ್ನು ಭರ್ತಿ ಮಾಡಿ ಸಲ್ಲಿಸುವುದು.
ನೋಂದಾಯಿಸಲು https://www.nvsp.in, https://voterportal.eci.gov.in, The voter Helpline Mobile application is available on following Google play store: https://play.google.com/store/apps/details?id=com.eci.citizen&hl=en IN Apple App Store: https://apps.apple/us/app/voter-helpline/idl456535004 ಗಳ ಮೂಲಕ 18ವರ್ಷ ಪೂರೈಸಿದ ಅರ್ಹ ನಾಗರಿಕರೆಲ್ಲರೂ ನೋಂದಾಯಿಸಬಹುದಾಗಿದೆ.
ಕರಡು ಮತದಾರರ ಪಟ್ಟಿಯಲ್ಲಿ ತಿದ್ದುಪಡಿಗಳಿದ್ದರೂ ಸಹ ಸರಿಪಡಿಸಿಕೊಳ್ಳಬಹುದಾಗಿದೆ. ಸಮೀಪದ ಮತದಾರರ ನೋಂದಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶುಲ್ಕರಹಿತ ಮತದಾರರ ಸಹಾಯವಾಣಿ 1950ಗೆ ಕರೆ ಮಾಡಬಹುದಾಗಿದೆ. ಈ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಲು, ನೋಂದಾಯಿಸಿಲು ಹಾಗೂ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…