Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯಲ್ಲಿರುವ ಒಟ್ಟು ಮತದಾರರೆಷ್ಟು ?  ಅಂತಿಮ ಮತದಾರರ ಪಟ್ಟಿ ಪ್ರಕಟ

Facebook
Twitter
Telegram
WhatsApp

ಚಿತ್ರದುರ್ಗ, (ಜನವರಿ.13) : ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯು ನಡೆದಿರುತ್ತದೆ. ಮತದಾರರ ಪಟ್ಟಿಯ ಅಂತಿಮ ಪ್ರಕಟಣೆಯನ್ನು ಜನವರಿ 13 ರಂದು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಅಂತಿಮ ಮತದಾರರ ಪಟ್ಟಿ ಪ್ರಚುರಪಡಿಸುವ ಸಂಬಂಧವಾಗಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಿ ಮಾತನಾಡಿದರು.
ಚುನಾವಣಾ ಆಯೋಗದ ನಿರ್ದೇಶನದನ್ವಯ 2021ರ ನವಂಬರ್ 8 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ನವೆಂಬರ್ 08 ರಿಂದ ಡಿಸೆಂಬರ್ 08 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ನವೆಂಬರ್ 14, 21 ಮತ್ತು 28ರ ಭಾನುವಾರಗಳಂದು ಮಿಂಚಿನ ನೋಂದಣಿಯ ಕಾರ್ಯಾಚರಣೆ ನಡೆಸಲಾಯಿತು. ಡಿಸೆಂಬರ್ 27ರಂದು ಹಕ್ಕು ಮತ್ತು ಆಕ್ಷೇಪಣೆಗಳನ್ನು ತೀರ್ಮಾನಿಸಿ ಇದೇ ಜನವರಿ 13 ರಂದು ಮತದಾರರ ಪಟ್ಟಿಗಳ ಅಂತಿಮ ಪ್ರಕಟಣೆ ಮಾಡಲಾಗಿದೆ ಎಂದು ಹೇಳಿದರು.
ಹಕ್ಕು ಮತ್ತು ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಮತದಾರರ ಪಟ್ಟಿಯನ್ನು ಮತಗಟ್ಟೆ ಕೇಂದ್ರ, ಗ್ರಾಮ ಪಂಚಾಯಿತಿ ಕಚೇರಿ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ, ತಾಲ್ಲೂಕು ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಮತ್ತು ಸಿಎಸ್‍ಸಿ ಹಾಗೂ www.ceokarnataka.kar.nic.in, https://chitradurga.nic.in ವೆಬ್‍ಸೈಟ್‍ಲ್ಲಿ ಪ್ರಕಟಿಸಲಾಗಿದೆ. ಮತದಾರರ ಪಟ್ಟಿಯನ್ನು voter help line App  ನಲ್ಲಿಯೂ ಸಹ ಪರಿಶೀಲಿಸಿಕೊಳ್ಳಬಹುದು ಎಂದರು.
ಮತದಾರರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹಾಗೂ ಅರ್ಜಿಗಳನ್ನು http://voterreg.kar.nic.in ಅಥವಾ http://www.nvsp.in   ನಲ್ಲಿಯೂ voter help line App  ಮೂಲಕ ಸಲ್ಲಿಸಬಹುದಾಗಿದೆ.

2022ರ ಜನವರಿ 01ಕ್ಕೆ 18 ವರ್ಷ ಪೂರ್ಣಗೊಳ್ಳುವವರು ಹಾಗೂ ಅರ್ಹ ಮತದಾರರು ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆ, ತಿದ್ದುಪಡಿ, ವರ್ಗಾವಣೆಗೆ ಅವಕಾಶ ಇರುತ್ತದೆ. ಆದ್ದರಿಂದ ಸಾರ್ವಜನಿಕರು ಪಟ್ಟಿಯನ್ನು ಪರಿಶೀಲಿಸಿಕೊಳ್ಳಬೇಕೆಂದು ಮನವಿ ಮಾಡಿ ಈ ಬಗ್ಗೆ ರಾಜಕೀಯ ಪಕ್ಷಗಳು ಸಹ ತಮ್ಮ ಮತಗಟ್ಟೆ ಏಜೆಂಟರ ಮೂಲಕವೂ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಲು ತಿಳಿಸಿದರು.
ಜನವರಿ 13 ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿನ ಒಟ್ಟು 1648 ಮತಗಟ್ಟೆಗಳಿಂದ 13,83,180 ಮತದಾರರಿದ್ದಾರೆ. ಇದರಲ್ಲಿ 6,93,634 ಪುರುಷ, 6,89,470 ಮಹಿಳೆಯರು ಹಾಗೂ 76 ಇತರೆ ಮತದಾರರಿದ್ದಾರೆ.

ನವಂಬರ್ 08 ರಂದು ಪ್ರಕಟಿಸಲಾದ ಕರಡು ಪಟ್ಟಿಯನ್ವಯ 6,90,407 ಪುರುಷ, 6,85,480 ಮಹಿಳೆಯವರು ಹಾಗೂ 77 ಇತರೆ ಸೇರಿ 13,75,964 ಮತದಾರರಿದ್ದರು. ಪರಿಷ್ಕರಣೆ ನಂತರ ಅಂತಿಮವಾಗಿ 7,216 ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದಾರೆ.

ಕರಡು ಮತದಾರರ ಪಟ್ಟಿಯನ್ವಯ 10,996 ಯುವ ಮತದಾರರಿದ್ದು ಅಂತಿಮ ಪಟ್ಟಿಯನ್ವಯ ಈ ಸಂಖ್ಯೆ 21,049 ಕ್ಕೆ ಏರಿಕೆಯಾಗಿದೆ. ಹಾಗೂ 387 ಸೇವಾ ಮತದಾರರು ನೊಂದಾಯಿಸಿದ್ದಾರೆ ಎಂದು ತಿಳಿಸಿದರು.

ಭಾರತೀಯ ಚುನಾವಣಾ ಆಯೋಗವು  ಹೊಸದಾಗಿ ಮತದಾರರ ಸಹಾಯವಾಣಿಯನ್ನು ಜಾರಿಗೆ ತಂದಿದ್ದು, ಎಲ್ಲ ರಾಜಕೀಯ ಪಕ್ಷದವರು ಪ್ರತಿ ಮತಗಟ್ಟೆಗೆ ಒಬ್ಬರಂತೆ ಮತಗಟ್ಟೆ ಮಟ್ಟದ ಏಜೆಂಟರನ್ನು ನೇಮಕ ಮಾಡಿ ಪಟ್ಟಿ ನೀಡುವಂತೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಿದ ಅವರು, ಮತದಾರರ ಸಹಾಯವಾಣಿ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಈ ಬಾರಿ ಮತದಾರರ ಸಹಾಯವಾಣಿ ಮುಖಾಂತರವೇ ಆನ್‍ಲೈನ್‍ನಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಿಕೊಳ್ಳುವಂತೆ ಅರಿವು ಮೂಡಿಸಲು ಕೋರಿದರು.

ಕೆಲವು ಮತದಾರರ ಹೆಸರು ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಇದ್ದು, ಒಂದು ಕಡೆ ಮಾತ್ರ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಲು ಅವಕಾಶ ಇರುವುದರಿಂದ ಮತದಾರರು ಸ್ವಯಂ ಪ್ರೇರಿತರಾಗಿ ಇತರೆ ಕಡೆ ಇರುವ ಹೆಸರುಗಳನ್ನು ತೆಗೆದುಹಾಕಲು voter help line App     ನಮೂನೆ-7ರಲ್ಲಿ ಅರ್ಜಿ ಸಲ್ಲಿಸುವಂತೆ ಕೋರಿದರು.
ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರನ್ನು ನೊಂದಾಯಿಸಲು ಪ್ರತಿಯೊಬ್ಬ ನಾಗರೀಕರ ಹಕ್ಕಾಗಿರುತ್ತದೆ. ಈ ಸದಾವಕಾಶವನ್ನು ಪ್ರತಿಯೊಬ್ಬರೂ ತಪ್ಪದೇ ಉಪಯೋಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಚುನಾವಣಾ ತಹಶೀಲ್ದಾರ್ ಸಿ.ಜೆ. ಕೃಷ್ಣಕುಮಾರ್, ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯ ಹಾಗೂ ರಾಜಕೀಯ ಪಕ್ಷಗಳ ಮುಖಂಡರಾದ ಪ್ರತಾಪ್ ಜೋಗಿ, ನರೇಂದ್ರ ಹಾಗೂ ಡಿ.ಎನ್.ಮೈಲಾರಪ್ಪ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!