Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು  ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

---Advertisement---

ಚಿತ್ರದುರ್ಗ. ಆಗಸ್ಟ್.16:  ಗುರುವಾರ ಸುರಿದ ಮಳೆ ವಿವರದನ್ವಯ ಹೊಸದುರ್ಗ ತಾಲ್ಲೂಕಿನಲ್ಲಿ 22.9 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅಧಿಕ ಮಳೆಯಾಗಿದೆ.

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 18.8 ಮಿ.ಮೀ, ಹಿರಿಯೂರು ತಾಲ್ಲೂಕು 4.3 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 6.5 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 10.30 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 1.3 ಮಿ.ಮೀ ಮಳೆಯಾಗಿದೆ.

ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 17.9 ಮಿ.ಮೀ, ನಾಯಕನಹಟ್ಟಿ 18.2 ಮಿ.ಮೀ, ಪರಶುರಾಂಪುರ 22.5 ಮಿ.ಮೀ, ತಳಕು 16.7 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 9.8 ಮಿ.ಮೀ, ಭರಮಸಾಗರ 7 ಮಿ.ಮೀ, ಹಿರೇಗುಂಟನೂರು 16.6 ಮಿ.ಮೀ, ತುರುವನೂರು 9.8 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 3.8 ಮಿ.ಮೀ, ಐಮಂಗಲ 2.9 ಮಿ.ಮೀ, ಧರ್ಮಪುರ 8.6 ಮಿ.ಮೀ, ಜೆ.ಜೆ.ಹಳ್ಳಿ 2 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 3.7 ಮಿ.ಮೀ, ಬಿ.ದುರ್ಗ 15.2 ಮಿ.ಮೀ, ರಾಮಗಿರಿ 1.3 ಮಿ.ಮೀ, ತಾಳ್ಯ 6.5 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 4.4 ಮಿ.ಮೀ, ಮಾಡದಕೆರೆ 7 ಮಿ.ಮೀ, ಮತ್ತೋಡು 49.6 ಮಿ.ಮೀ, ಶ್ರೀರಾಂಪುರ 46.2 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರುನಲ್ಲಿ 1 ಮಿ.ಮೀ ಹಾಗೂ ದೇಮಸಮುದ್ರದಲ್ಲಿ 1.6 ಮಿ.ಮೀ ಮಳೆಯಾಗಿದೆ.

21 ಮನೆಗಳು ಭಾಗಶಃ ಹಾನಿ: ಗುರುವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಒಟ್ಟು 21 ಮನೆಗಳು ಭಾಗಶಃ ಹಾನಿಯಾಗಿವೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 15 ಮನೆಗಳು ಭಾಗಶಃ ಹಾನಿ ಹಾಗೂ 1 ಹಸು ಮೃತಪಟ್ಟಿದೆ. ಹೊಳಲ್ಕೆರೆಯಲ್ಲಿ 5 ಮನೆಗಳು ಭಾಗಶಃ ಹಾನಿಯಾಗಿವೆ ಹಾಗೂ ಮೊಳಕಾಲ್ಮುರ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...