Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಳೆ ವರದಿ

---Advertisement---

 

 

ಚಿತ್ರದುರ್ಗ, ಮೇ.18:  ಶುಕ್ರವಾರ ಸಂಜೆ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 42.8ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-2ರಲ್ಲಿ 9.2ಮಿ.ಮೀ, ಭರಮಸಾಗರದಲ್ಲಿ 4.4ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 30.4ಮಿ.ಮೀ, ಬಾಗೂರಿನಲ್ಲಿ 5.5 ಮಿ.ಮೀ, ಮಾಡದಕೆರೆಯಲ್ಲಿ 13 ಮಿ.ಮೀ, ಮತ್ತೋಡಿನಲ್ಲಿ 3.2ಮಿ.ಮೀ ಹಾಗೂ ಶ್ರೀರಾಂಪುರದಲ್ಲಿ 5.2 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 19.2 ಮಿ.ಮೀ, ರಾಮಗಿರಿಯಲ್ಲಿ 8.4ಮಿ.ಮೀ, ಚಿಕ್ಕಜಾಜೂರಿನಲ್ಲಿ 41.2 ಮಿ.ಮೀ, ಹೆಚ್.ಡಿ.ಪುರದಲ್ಲಿ 36.2ಮಿ.ಮೀ, ತಾಳ್ಯದಲ್ಲಿ 4.2ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಇಕ್ಕನೂರಿನಲ್ಲಿ 22.4ಮಿ.ಮೀ, ಈಶ್ವರಗೆರೆಯಲ್ಲಿ 5.8 ಮಿ.ಮೀ ಮಳೆಯಾಗಿದೆ.

8 ಮನೆಗಳು ಭಾಗಶಃ ಹಾನಿ: ಶುಕ್ರವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಭಾಗಶಃ 8 ಮನೆಗಳು ಹಾಗೂ 0.54 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 1 ಭಾಗಶಃ ಮನೆಹಾನಿಯಾಗಿದೆ.

ಹೊಸದುರ್ಗ ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿವೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ ಭಾಗಶಃ 1 ಮನೆ ಹಾಗೂ 0.14  ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಹಿರಿಯೂರು ತಾಲ್ಲೂಕಿನಲ್ಲಿ ಭಾಗಶಃ 4 ಮನೆ  ಮತ್ತು 0.40 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment