ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ.19 : ನಗರದ ಮುಖ್ಯ ರಸ್ತೆ, ಪ್ರವಾಸಿ ಮಂದಿರದ ಪಕ್ಕದಲ್ಲಿ ನಿರ್ಮಿಸಿರುವ ವಾಣಿಜ್ಯ ಮಳಿಗೆಯಲ್ಲಿ ಶೌಚಾಲಯ ಸರಿಯಾದ ನಿರ್ವಹಣೆ ಇಲ್ಲದೇ ಇರುವುದರಿಂದ ಇದ್ದು, ಇಲ್ಲದಂತಾಗಿರುವುದು ಮಳಿಗೆಯಲ್ಲಿ ವ್ಯಾಪಾರ ನಡೆಸುತ್ತಿರುವ ಮಹಿಳೆಯರಿಗೆ ಅತೀವ ತೊಂದರೆಯಾಗಿದೆ ಎಂದು ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ಮತ್ತು ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧೀಕ್ಷಕ ಪ್ರಮೋದ್‍ರವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ವಾಣಿಜ್ಯ ಸಂಕೀರ್ಣದಲ್ಲಿ ಶೌಚಾಲಯವಿದ್ದು, ಇಲ್ಲದಂತಾಗಿರುವುದನ್ನು ನೋಡಿದರೆ ಸರ್ಕಾರದ ಹಣ ಹೇಗೆ ಪೋಲಾಗುತ್ತಿದೆ ಎನ್ನುವುದಕ್ಕೆ ಸ್ಪಷ್ಠ ನಿದರ್ಶನ. ಈಗಲಾದರೂ ಇಲ್ಲಿ ಶೌಚಾಲಯವನ್ನು ತೆರೆದು ಮಹಿಳೆಯರ ಪ್ರಕೃತಿ ಕರೆಗೆ ಅವಕಾಶ ಮಾಡಿಕೊಡುವಂತೆ ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ಎಂ.ಹನೀಫ್, ಕಾರ್ಯಾಧ್ಯಕ್ಷ ಅಬ್ದುಲ್ ನವೀದ್, ಕೆ.ಕೆ.ಎನ್.ಎಸ್.ಎಸ್. ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಇವರುಗಳು ಮನವಿ ಮಾಡಿದ್ದಾರೆ.