Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮಾರ್ಚ್ 27 ರಂದು ವಿಶ್ವ ರಂಗಭೂಮಿ ದಿನಾಚರಣೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 25 : ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪಿಳ್ಳೇಕೆರೆನಹಳ್ಳಿ ಗ್ರಾಮದಲ್ಲಿರುವ ಬಾಪೂಜಿ ಸಮೂಹ ಸಂಸ್ಥೆಯ ಬಾಪೂಜಿ ಸಭಾಂಗಣದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ -26 ಅಂಗವಾಗಿ ಶಿಕ್ಷಣದಲ್ಲಿ ರಂಗಕಲೆ ರಂಗಭೂಮಿ ತರಬೇತಿ ಕಾರ್ಯಾಗಾರ, ರಂಗಗೀತೆ, ಉಪನ್ಯಾಸ, ಕವಿಕಾವ್ಯ ಪರಿಚಯ, ರಂಗಸಂದೇಶ ಹಾಗೂ ನಾಟಕ ಪ್ರದರ್ಶನಗಳನ್ನು ಮಾರ್ಚ್ 27, ಶುಕ್ರವಾರ ಬೆಳಿಗ್ಗೆ 10-30ಕ್ಕೆ ಏರ್ಪಡಿಸಲಾಗಿದೆ.

 

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಡಾ.ಕೆ.ಎಮ್.ವೀರೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಪ್ರೊ.ಎಂಆರ್.ಜಯಲಕ್ಷ್ಮಿ ಅಧ್ಯಕ್ಷತೆ ವಹಿಸುವರು. ಹಿರಿಯ ಸಾಹಿತಿ ಹುರುಳಿ.ಎಮ್. ಬಸವರಾಜ್ ಶಿಕ್ಷಣದಲ್ಲಿ ರಂಗಭೂಮಿಯ ಸಾಧ್ಯತೆಗಳು ವಿಷಯದ ಬಗ್ಗೆ ಉಪನ್ಯಾಸ ನೀಡುವರು.

 

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಮ್.ಗುರುನಾಥ್, ನಿವೃತ್ತ ಪ್ರಾಚಾರ್ಯ ಹಾಗೂ ಹಿರಿಯ ರಂಗಭೂಮಿ ಕಲಾವಿದ ಕೆ.ಜಂಬುನಾಥ್, ಬಾಪೂಜಿ ಸಮೂಹ ಸಂಸ್ಥೆಗಳ ನಿರ್ದೇಶಕ ಕೆ.ಎಮ್.ಚೈತನ್ಯ, ಉಪಪ್ರಾಚಾರ್ಯ ಹೆಚ್.ಎನ್. ಶಿವಕುಮಾರ್, ಪ್ರಾಧ್ಯಾಪಕ ಡಾ,ಜಿ.ಹನುಮಂತರೆಡ್ಡಿ, ಉಪನ್ಯಾಸಕರಾದ ಟಿ.ವೈ.ಗೀತ, ತಂಜೀಮ, ಎಸ್.ಮಂಜುನಾಥಪ್ಪ, ಓ.ಎಮ್. ಮಂಜುನಾಥ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಆರ್.ಗಿರೀಶ್ ಮುಂತಾದವರು ಮುಖ್ಯಅತಿಥಿಗಳಾಗಿ ಉಪಸ್ಥಿತರಿರುವರು.

 

ಅಮೇರಿಕನ್ ಪ್ರಾಯೋಗಿಕ ರಂಗಭೂಮಿಯ ಅತ್ಯಂತ ಪ್ರಭಾವಶಾಲಿ ಥಿಯೇಟರ್ ಕಂಪನಿ ದಿ ವೂಸ್ಟರ್ ಗ್ರೂಪ್ ಮಾಲೀಕ ಹಾಗೂ ಹಿರಿಯ ರಂಗಕರ್ಮಿ ವಿಲ್ ಯೆಮ್ ಡೆಪೋ ಪ್ರಪಂಚಕ್ಕೆ ನೀಡಿದ ರಂಗ ಸಂದೇಶವನ್ನು ರಂಗ ನಿರ್ದೇಶಕ ಕೆ.ಪಿ.ಎಮ್. ಗಣೇಶಯ್ಯ ವಾಚನ ಮಾಡಲಿದ್ದಾರೆ. ವಿದ್ಯಾವಾರಿಧಿ ತ.ರಾ.ಸುಬ್ಬರಾವ್ (ತ.ರಾ.ಸು) ರವರ ಪರಿಚಯ ಲೇಖನವನ್ನು ಪ್ರಾಧ್ಯಾಪಕ ಹೆಚ್.ಶಿವಕುಮಾರ್ ವಾಚಿಸುವರು. ರಂಗಸೌರಭ ಕಲಾವಿದರಿಂದ ರಂಗಗೀತೆ ಗಾಯನವಿರುತ್ತದೆ ಎಂದು ರಂಗಸೌರಭ ಕಲಾ ಸಂಘದ ಅಧ್ಯಕ್ಷ ಡಾ.ಮೋಹನ್‍ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...