ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ನ. 09 : ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿಯವರು ಇಂದು ನಗರದ ವಿವಿಧ ಕಾಲೇಜುಗಳಿಗೆ ಭೇಟಿ ನೀಡುವುದರ ಮೂಲಕ ಶಿಕ್ಷಕ ಮತ್ತು ಉಪನ್ಯಾಸಕರ ಸಮಸ್ಯೆಯನ್ನು ಆಲಿಸಿದರು.
ನಗರದ ಎಸ್.ಜೆ.ಎಂ.ಐ.ಟಿ, ಸರ್ಕಾರಿ ಪಾಲಿಟೆಕ್ನಿಕ್, ಸರ್ಕಾರಿ ಐ.ಟಿಐ. ಮತ್ತು ಸದ್ಗುರು ಕಬೀರಾನಂದಾಶ್ರಮದವತಿಯಿಂದ ನಡೆಯುತ್ತಿರುವ ಕಾಲೇಜಿಗೆ ಭೇಟಿ ನೀಡುವುದರ ಮೂಲಕ ಅಲ್ಲಿನ ಶಿಕ್ಷಕರ ಮತ್ತು ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದರು.
ಇದೇ ಸಂದರ್ಭದಲ್ಲಿ ನಗರದ ಶ್ರೀ ಕಬೀರಾನಂದಾಶ್ರಮದ ಪೀಠಾಪಧಿಗಳಾದ ಶ್ರೀ ಶಿವಲಿಂಗಾನಂದ ಶ್ರೀಗಳು ಹುಟ್ಟು ಹಬ್ಬದ ಅಂಗವಾಗಿ ಆಶ್ರಮಕ್ಕೆ ಭೇಟಿ ನೀಡಿದ ನಾರಾಯಣಸ್ವಾಮಿಯವರು ಶಾಲು, ಹಾರಗಳನ್ನು ಅರ್ಪಿಸುವುದರ ಮೂಲಕ ಹುಟ್ಟು ಹಬ್ಬದ ಶುಭ ಕೋರಿದರು.

ಈ ಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿಗಳಾದ ನೀಲಕಂಠಚಾರ್, ನಿವೃತ್ತ ಮುಖ್ಯ ಶಿಕ್ಷಕರಾದ ಜಯ್ಯಣ್ಣ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ, ತಾಲ್ಲೂಕು ಅಧ್ಯಕ್ಷ ಬಸವರಾಜು, ಭೀಮಾರೆಡ್ಡಿ, ಹನುಮಂತಪ್ಪ, ಚಿಕ್ಕ ನಾಗಪ್ಪ, ಎಸ್.ಜೆ.ಎಂ.ಐ.ಟಿ.ಯ ಪ್ರಾಂಶುಪಾಲರಾದ ಭರತ್, ವ್ಯವಸ್ಥಾಪಕರಾದ ಕುಮಾರಸ್ವಾಮಿ ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












