ಸುದ್ದಿಒನ್, ಚಿತ್ರದುರ್ಗ, ಜೂನ್. 10: ನಗರದ ಮಹಾವೀರ ನಗರದ ನಿವಾಸಿ ಹಾಗೂ ಮೆದೇಹಳ್ಳಿ ರಸ್ತೆಯಲ್ಲಿರುವ ಪ್ರಸಿದ್ಧ ‘ಬಾಲಾಜಿ ಗ್ಲಾಸ್ ಅಂಡ್ ಪ್ಲೈವುಡ್’ ಮಳಿಗೆಯ ಮಾಲೀಕರಾದ ಎ. ಮಂಜುನಾಥ ಶೆಟ್ಟಿ (63 ವರ್ಷ) ಅವರು ನಿನ್ನೆ (ಮಂಗಳವಾರ, ಜೂನ್ 09) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರು ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಗೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಅನಾರೋಗ್ಯಕ್ಕೊಳಗಾಗಿ ನಿನ್ನೆ (ಜೂನ್. 09, ಮಂಗಳವಾರ) ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತರ ನಿಧನಕ್ಕೆ ಬಂಧು-ಮಿತ್ರರು ತೀವ್ರ ಕಂಬನಿ ಮಿಡಿದಿದ್ದಾರೆ. ಅಗಲಿದ ಮಂಜುನಾಥ ಶೆಟ್ಟಿ ಅವರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಬಿಟ್ಟುಹೋಗಿದ್ದಾರೆ.
ಮೃತರ ಅಂತ್ಯಕ್ರಿಯೆಯನ್ನು ಇಂದು (ಜೂನ್. 10, ಬುಧವಾರ) ಸಂಜೆ 4:30 ರ ಸುಮಾರಿಗೆ ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.











