ಚಿತ್ರದುರ್ಗ, (ಜ.20) : ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ. ಪರುಶುರಾಮ ಅವರು ಗುರುವಾರ ನಗರದ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ G. ರಾಧಿಕಾ ಅವರಿಂದ ಅಧಿಕಾರ ಸ್ವೀಕರಿಸಿದರು.
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಪೊಲೀಸ್ ಅಧೀಕ್ಷಕಾರಗಿ ಕೆ.ಪರಶುರಾಮ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು
ಈ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಈ ಮೊದಲು ಅವರು ಹಾವೇರಿ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಮತ್ತು ಚಿತ್ರದುರ್ಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.