Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಗೆ 4 ನೇ ರ‌್ಯಾಂಕ್

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 03 : ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, ವಿದ್ಯಾರ್ಥಿಯಾದ ಕಲ್ಯಾಣ ಬಾಬು ಇವರು 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 622 ಅಂಕಗಳನ್ನು ಪಡೆದು ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದಿದ್ದಾರೆ.

ಇಂದು.ಕೆ 621 ಅಂಕ, ಆಸೇಚನ ಪಿ ದಾಸರಿ, ಕಾವ್ಯಶ್ರೀ ಸಿ ಜೆ, ಕೀರ್ತನಾ ಎಂ ಜಿ 625ಕ್ಕೆ 620 ಅಂಕಗಳನ್ನು ಗಳಿಸಿರುತ್ತಾರೆ.
ಒಟ್ಟು 147 ವಿದ್ಯಾರ್ಥಿಗಳಲ್ಲಿ 90 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 45 ವಿದ್ಯಾರ್ಥಿಗಳು ಪ್ರಥಮ ದರ್ಜೆ, 06 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು ಪ್ರಥಮ ಭಾಷೆ ಕನ್ನಡದಲ್ಲಿ 08 ವಿದ್ಯಾರ್ಥಿಗಳು 125ಕ್ಕೆ 125 ಅಂಕ, ದ್ವಿತೀಯ ಭಾಷೆ ಇಂಗ್ಲೀಷ್‍ನಲ್ಲಿ 09, ತೃತೀಯ ಭಾಷೆ ಹಿಂದಿಯಲ್ಲಿ 14, ಗಣಿತ ವಿಷಯದಲ್ಲಿ 08, ವಿಜ್ಞಾನ ವಿಷಯದಲ್ಲಿ 09 ಹಾಗೂ ಸಮಾಜ ವಿಜ್ಞಾನ ವಿಷಯದಲ್ಲಿ 13 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.

625ಕ್ಕೆ 622 ಅಂಕಗಳನ್ನು ಗಳಿಸಿ ರಾಜ್ಯ 4ನೇ ರ್ಯಾಂಕ್ ಪಡೆದಿರುವ ಈ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ ಹಾಗು ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...