Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಶ್ ಅಭಿನಯದ  ಟಾಕ್ಸಿಕ್ ಸಿನಿಮಾ ವಿರುದ್ಧ ಸಿಡಿದೆದ್ದ ಕ್ರೈಸ್ತ ಒಕ್ಕೂಟ

---Advertisement---

ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾವು ಕ್ರೈಸ್ತ ಧರ್ಮದ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪ ಕೇಳಿಬರುತ್ತಿದೆ.ಚಿತ್ರದಲ್ಲಿನ ಕೆಲವು ದೃಶ್ಯಗಳು ದೇವದೂತರಿಗೆ ಅಪಮಾನ ಮಾಡಿವೆ ಎಂದು ರಾಷ್ಟ್ರೀಯ ಕ್ರೈಸ್ತ ಒಕ್ಕೂಟ ಆರೋಪಿಸಿದೆ.

ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ರಾಷ್ಟ್ರೀಯ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್, ‘ಕನ್ನಡ ಸಿನಿಮಾ ಬೆಳೆಯಬೇಕು ಎನ್ನುವುದು ನಮ್ಮ ಆಸೆ. ಆದರೆ, ಚಿತ್ರದ ಯಶಸ್ಸಿನ ಹೆಸರಿನಲ್ಲಿ ಯಾವುದೇ ಧರ್ಮಕ್ಕೆ ಅಪಮಾನ ಮಾಡಬಾರದು. ಟಾಕ್ಸಿಕ್ ಸಿನಿಮಾದಲ್ಲಿ ನಮ್ಮ ಧರ್ಮದ ಪವಿತ್ರ ದೇವದೂತ ಸಂತ ಮಿಕಯೇಲ್ (Archangel Michael) ಅವರ ಪುತ್ಥಳಿಯ ಮುಂದೆ ಲೈಂಗಿಕ ಚಟುವಟಿಕೆ ಹಾಗೂ ಅಶ್ಲೀಲ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಇದು ಇಡೀ ಕ್ರೈಸ್ತ ಸಮುದಾಯಕ್ಕೆ ಮಾಡಿರುವ ಅಪಮಾನ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಡಲೇ ಚಿತ್ರತಂಡ ಈ ದೃಶ್ಯಗಳನ್ನು ತೆಗೆದುಹಾಕಬೇಕು ಮತ್ತು ಯೂಟ್ಯೂಬ್‌ನಲ್ಲಿರುವ ವಿವಾದಿತ ಪೋಸ್ಟ್‌ಗಳನ್ನು ಡಿಲೀಟ್ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಚಿತ್ರತಂಡ ಕೂಡಲೇ ಕ್ರೈಸ್ತ ಸಮುದಾಯದ ಕ್ಷಮೆ ಕೇಳಬೇಕು. ಒಂದು ವೇಳೆ ಸೆನ್ಸಾರ್ ಬೋರ್ಡ್ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಅಥವಾ ಚಿತ್ರತಂಡ ದೃಶ್ಯಗಳನ್ನು ತೆಗೆಯದಿದ್ದರೆ, ಸಿನಿಮಾ ಬಿಡುಗಡೆಯ ಸಮಯದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now