Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಗರ ಸ್ಥಳೀಯ ಸಂಸ್ಥೆ ಖಾಲಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

Facebook
Twitter
Telegram
WhatsApp

 

ಚಿತ್ರದುರ್ಗ. ನ.04: ಚಿತ್ರದುರ್ಗ ಹಾಗೂ ಚಳ್ಳಕೆರೆ ನಗರಸಭೆ ಮತ್ತು ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯಲ್ಲಿ  ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಚಿತ್ರದುರ್ಗ ನಗರಸಭೆಯ 15ನೇ ವಾರ್ಡ್-ಹಿಂದುಳಿದ ವರ್ಗ-(ಎ), ಚಳ್ಳಕೆರೆ ನಗರಸಭೆಯ 4ನೇ ವಾರ್ಡ್-ಸಾಮಾನ್ಯ ಹಾಗೂ ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯ ಜಾಗನೂರುಹಟ್ಟಿಯ 1ನೇ ವಾರ್ಡ್-ಪರಿಶಿಷ್ಟ ಜಾತಿಗೆ ಮೀಸಲಾತಿ ನಿಗಧಿಯಾಗಿದೆ.
2024ರ ನ.4 ಸೋಮವಾರದಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ನ.11 ಸೋಮವಾರ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ನ.12 ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.14 ಗುರುವಾರ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ನ.23 ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಒಂದು ವೇಳೆ ಮರು ಮತದಾನದ ಅವಶ್ಯಕತೆ ಬಿದ್ದಲ್ಲಿ ನ.25 ಸೋಮವಾರ ಮರು ಮತದಾನ ನಡೆಸಲಾಗುವುದು. ನ.26 ಮಂಗಳವಾರ ಸಂಬಂಧಪಟ್ಟ ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಸಲಾಗುವುದು. ವಿಜೇತ ಅಭ್ಯರ್ಥಿಯ ಘೋಷಣೆ ತರುವಾಯ ಚುನಾವಣೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಲಾಗುವುದು. ನ.04 ರಿಂದ 26 ರವರೆಗೆ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‍ಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಐವರು ಬಾಣಂತಿಯರ ಸಾವಿನ ಬೆನ್ನಲ್ಲೇ ಬ್ರಿಮ್ಸ್ ನಲ್ಲಿ ಶಿಶು ಸಾವು..!

ಬಳ್ಳಾರಿ: ಬೀಮ್ಸ್ ನಲ್ಲಿ ಹೆರಿಗೆಗೆಂದು ದಾಖಲಾಗಿದ್ದ ಐವರು ಬಾಣಂತಿಯರು ಸಾವನ್ನಪ್ಪಿದ ಪ್ರಕರಣ ಮಾಸುವ ಮುನ್ನವೇ ಇದೀಗ ಶಿಶು ಒಂದು ಸಾವನ್ನಪ್ಪಿದೆ. ಬೀಮ್ಸ್ ಗೆ ನಾರ್ಮಲ್ ಡೆಲಿವರಿಗೆಂದು ಗರ್ಭಿಣಿ ಅಡ್ಮಿಟ್ ಆಗಿದ್ದರು. ಆದರೆ ಇದ್ದಕ್ಕಿದ್ದ ಹಾಗೇ

ಚಿತ್ರದುರ್ಗ ನಗರಸಭೆಯ ಗೋಪಾಲಕೃಷ್ಣ ಇನ್ನಿಲ್ಲ…!

  ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 05 : ನಗರಸಭೆ ನೌಕರ ಹಾಗೂ ಪೌರ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಗೋಪಾಲಕೃಷ್ಣ (55) ಗುರುವಾರ ನಿಧನರಾದರು. ಹೃದಯಸಂಬಂಧಿ ರೋಗದಿಂದ ಇತ್ತೀಚೆಗೆ ಚೇತರಿಸಿಕೊಂಡಿದ್ದ ಅವರು, ಬುಧವಾರ ರಾತ್ರಿ

ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹಾರಾಷ್ಟ್ರ ಸಿಎಂ ಆಗಿ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ

ಸುದ್ದಿಒನ್ | ಮುಂಬೈನ ಆಜಾದ್ ಮೈದಾನದಲ್ಲಿ ಗುರುವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಆಜಾದ್

error: Content is protected !!