ಚಿತ್ರದುರ್ಗ. ನ.04: ಚಿತ್ರದುರ್ಗ ಹಾಗೂ ಚಳ್ಳಕೆರೆ ನಗರಸಭೆ ಮತ್ತು ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.
ಚಿತ್ರದುರ್ಗ ನಗರಸಭೆಯ 15ನೇ ವಾರ್ಡ್-ಹಿಂದುಳಿದ ವರ್ಗ-(ಎ), ಚಳ್ಳಕೆರೆ ನಗರಸಭೆಯ 4ನೇ ವಾರ್ಡ್-ಸಾಮಾನ್ಯ ಹಾಗೂ ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯ ಜಾಗನೂರುಹಟ್ಟಿಯ 1ನೇ ವಾರ್ಡ್-ಪರಿಶಿಷ್ಟ ಜಾತಿಗೆ ಮೀಸಲಾತಿ ನಿಗಧಿಯಾಗಿದೆ.
2024ರ ನ.4 ಸೋಮವಾರದಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ನ.11 ಸೋಮವಾರ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ನ.12 ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.14 ಗುರುವಾರ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ನ.23 ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಒಂದು ವೇಳೆ ಮರು ಮತದಾನದ ಅವಶ್ಯಕತೆ ಬಿದ್ದಲ್ಲಿ ನ.25 ಸೋಮವಾರ ಮರು ಮತದಾನ ನಡೆಸಲಾಗುವುದು. ನ.26 ಮಂಗಳವಾರ ಸಂಬಂಧಪಟ್ಟ ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಸಲಾಗುವುದು. ವಿಜೇತ ಅಭ್ಯರ್ಥಿಯ ಘೋಷಣೆ ತರುವಾಯ ಚುನಾವಣೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಲಾಗುವುದು. ನ.04 ರಿಂದ 26 ರವರೆಗೆ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‍ಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…