Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ: KEA ವೆಬ್‌ಸೈಟ್‌ನಲ್ಲಿ ಕೀ ಉತ್ತರ ಪ್ರಕಟ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

---Advertisement---

ಬೆಂಗಳೂರು.ಆಗಸ್ಟ್.3: ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (CPC) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ ಆಗಸ್ಟ್ 02, 2026 ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಯ (ಸಾಮಾನ್ಯ ಜ್ಞಾನ ಪತ್ರಿಕೆ) ತಾತ್ಕಾಲಿಕ ಕೀ ಉತ್ತರಗಳನ್ನು (Provisional Key Answers) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಪ್ರಕಟಿತ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದೂರು/ಆಕ್ಷೇಪಣೆ ಸಲ್ಲಿಸಲು ಕೆಇಎ ಅವಕಾಶ ಕಲ್ಪಿಸಿದೆ.

ಆಕ್ಷೇಪಣೆ ಸಲ್ಲಿಕೆಗೆ ಮುಖ್ಯ ವಿವರಗಳು:

ಕೊನೆಯ ದಿನಾಂಕ ಮತ್ತು ಸಮಯ: ಆಗಸ್ಟ್ 06, 2026 ರ ಬೆಳಿಗ್ಗೆ 10:30 ಗಂಟೆಯೊಳಗೆ.

ಅಧಿಕೃತ ವೆಬ್‌ಸೈಟ್ ಪೋರ್ಟಲ್: cetonline.karnataka.gov.in/kea/

ಆಕ್ಷೇಪಣೆ ಶುಲ್ಕ: ಸಲ್ಲಿಕೆಯಾಗುವ ಪ್ರತಿ ಆಕ್ಷೇಪಣೆಗೆ ರೂ. 25/- ಪಾವತಿಸಬೇಕು (ಈ ಶುಲ್ಕವನ್ನು ಹಿಂತಿರುಗಿಸಲಾಗುವುದಿಲ್ಲ).

ಆಕ್ಷೇಪಣೆ ಸಲ್ಲಿಸುವಾಗ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್ (Version Code), ಪ್ರಶ್ನೆ ಸಂಖ್ಯೆ ಹಾಗೂ ಬೆಂಬಲಿತ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಅಪ್‌ಲೋಡ್ ಮಾಡುವುದು ಕಡ್ಡಾಯ.ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದಿರುವ, ಆಧಾರರಹಿತ ಹಾಗೂ ಅಪೂರ್ಣವಾಗಿರುವ ಅರ್ಜಿಗಳನ್ನು ಪುರಸ್ಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ನೇರವಾಗಿ ತಿರಸ್ಕರಿಸಲಾಗುವುದು.

Join WhatsApp

Join Now

Join Telegram

Join Now