Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿಜಯೇಂದ್ರ ಅವರ ಪದಗ್ರಹಣಕ್ಕೆ ಗೈರಾಗಿದ್ದ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಹಾಜರಾಗಿದ್ದಕ್ಕೆ ಸ್ಪಷ್ಟನೆ

---Advertisement---

 

ಬೆಂಗಳೂರು: ಇಂದು ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕಾರ ಮಾಡಿದ್ದಾರೆ. ಬಿಜೆಪಿಯಲ್ಲಿ ಈ ವಿಚಾರಕ್ಕೆ ಹಲವರಿಗೆ ಅಸಮಾಧಾನವಿದೆ. ಅದು ಪದಗ್ರಹಣದಲ್ಲೂ ಎದ್ದು ಕಾಣುತ್ತಿದೆ. ಈ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರೇ ಗೈರಾಗಿದ್ದರು. ಎಸ್ ಟಿ ಸೋಮಶೇಖರ್ ಕೂಡ ಗೈರಾಗಿದ್ದರು. ಆದರೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದದ್ದು ಗಮನ ಸೆಳೆದಿತ್ತು‌.

 

ಕುಂಬಳಗೋಡು ಪೊಲೀಸ್ ಠಾಣೆ ಉದ್ಘಾಟೆನಯಲ್ಲಿ ಭಾಗಿಯಾಗಿದ್ದ ಎಸ್ ಟಿ ಸೋಮಶೇಖರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ‌. ನನಗೆ ಈ ಕಾರ್ಯಕ್ರಮ ಮೊದಲೇ ನಿಗದಿಯಾಗಿತ್ತು. ಹಾಗಾಗಿ ಬಂದಿದ್ದೇನೆ ಎಂದಿದ್ದರು. ನನ್ನನ್ನು ಪಕ್ಷದಲ್ಲಿ ಯಾರೇ ಕಡೆಗಣಿಸಲಿ, ಕ್ಷೇತ್ರದ ಜನರು ಜೊತೆಗಿದ್ದಾರೆ. ನನ್ನ ಬಗ್ಗೆ ಮಾತನಾಡಿದ ರಾಷ್ಟ್ರೀಯ ನಾಯಕರು ಯಾವ ಪರಿಸ್ಥಿತಿಯಲ್ಲಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

 

ಆರು ತಿಂಗಳ ಬಳಿಕ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹುದ್ದೆಗೆ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಇಂದು ಅಧಿಕೃತವಾಗಿ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಕೂಡ ನಡೆದಿದೆ‌. ಮುಂದೆ ದೊಡ್ಡ ಕಾರ್ಯಕ್ರಮ ಮಾಡಿ, ಕೇಂದ್ರ ನಾಯಕರನ್ನು ಕರೆಸುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಕರೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...