Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಕೇಸಲ್ಲಿ ಸಿಎಂ ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ : ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

---Advertisement---

ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತ ಕೇಸ್ ಗೆ ಇದೀಗ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಮೂಡಾ ಪ್ರಕರಣದ ತನಿಖೆ ನಡೆಸುತ್ತಿದ್ದ ಇಡಿಯ ಸಂಪೂರ್ಣ ತನಿಖೆ ಮುಗಿದಿದೆ. ಈ ಸಂಬಂಧ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದು, ಈ ಕೇಸಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಎಲ್ಲಿಯೂ ಇಲ್ಲ ಎಂದು ತಿಳಿಸಲಾಗಿದೆ.

1994ರಿಂದ ಆಗಿರುವಂತ ಬೆಳವಣಿಗೆ ಇದಾಗಿದೆ. ಡಿನೋಟಿಫೈ ಮಾಡಬೇಕಾದರೆ, ಭೂ ಪರಿವರ್ತನೆ ಮಾಡುವಾಗ ನಿಯಮ ಉಲ್ಲಂಘನೆಯನ್ನು ಅಧಿಕಾರಿಗಳು ಮಾಡಿದ್ದಾರೆ. ಮೂಡಾ ಆಯುಕ್ತರು, ರೆವೆನ್ಯೂ ಅಧಿಕಾರಿಗಳು ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆಂದು ತನಿಖೆಯಲ್ಲಿ ತಿಳಿಸಲಾಗಿದೆ. ಸೋಮವಾರ ಲೋಕಾಯುಕ್ತ ವರದಿಯನ್ನು ಕೋರ್ಟ್ ಗೆ ವರದಿಯನ್ನು ಸಲ್ಲಿಸಲಾಗುತ್ತದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಫಸ್ಟ್ ರಿಯಾಕ್ಷನ್ ಕೊಟ್ಟಿದ್ದು, ನಂಗೆ ಗೊತ್ತಿಲ್ಲ ರೀ.. ನಂಗೊತ್ತಿಲ್ಲ ಎಂದು ಹೇಳಿ ಮುನ್ನಡೆದಿದ್ದಾರೆ.

ಈ ಸಂಬಂಧ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಪ್ರತಿಕ್ರಿಯೆ ನೀಡಿದ್ದು, ನನಗೆ ಇದು ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ನ್ಯಾಯಾಲಯಕ್ಕೆ ಸಲ್ಲಿಸಿರುವ ದಾಖಲಾತಿಯಲ್ಲಿ ಅವರು ಅಪರಾಧ ಎಸಗಿದ್ದಾರೆ ಎಂಬುದಕ್ಕೆ ದಾಖಲೆ ಇದೆ. ಅವರ ಅಧಿಕಾರದ ಅವಧಿಯಲ್ಲಿಯೇ ಕೃತ್ಯಗಳು ನಡೆದಿರುವುದು. ಅವರ ಪ್ರಭಾವ ಇಲ್ಲದೆ ಅಧಿಕಾರಿಗಳು ಅಪರಾಧ ಎಸಗಲು ಸಾಧ್ಯವಿಲ್ಲ. ಲೋಕಾಯುಕ್ತರು ಸಿದ್ದರಾಮಯ್ಯ ಅವರ ಪಾತ್ರ ಇಲ್ಲ ಎಂದು ಹೇಳುವಂತೆ ಇಲ್ಲ. ಒಂದು ವೇಳೆ ಹೇಳಿದರು, ನಮ್ಮ ಬಳಿ ಅದನ್ನ ಪ್ರೂವ್ ಮಾಡುವುದಕ್ಕೆ ಸಾಕ್ಷಿಗಳು ಇದಾವೆ. ಹೋರಾಟ ಮುಂದುವರೆಸುತ್ತೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...