ಚಿತ್ರದುರ್ಗ, ಅ.01: ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ ಹಾಗೂ ನಗರಸಭೆ ಸಹಯೋಗದಲ್ಲಿ ಭಾನುವಾರ ನಗರದ ಐತಿಹಾಸಿಕ ಕೋಟೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.
ಉಪವಿಭಾಗಾಧಿಕಾರಿ ಎಂ.ಕಾರ್ತೀಕ್ ಅವರು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ಸ್ವಚ್ಛತಾ ಪ್ರತಿಜ್ಞೆ ಬೋಧಿಸಿದರು. ನಗರಸಭೆ ಪೌರಾಯುಕ್ತೆ ರೇಣುಕಾ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ನಾಗರಾಜ ಸೇರಿದಂತೆ ನಗರದ ಸ್ತ್ರೀ ಶಕ್ತಿ ಸಂಘದ ಸದಸ್ಯರು, ನಗರಸಭೆ ಆರೋಗ್ಯ ನೀರೀಕ್ಷಕರು, ಪೌರಕಾರ್ಮಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















