Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಿ : ಪ್ರವೀಣ್ ಶೆಟ್ಟಿ ಬಣದ ಕರವೇ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ನಾಯಕನಹಟ್ಟಿ, ಡಿಸೆಂಬರ್.13 : ಪಟ್ಟಣ ಮತ್ತು ಹೋಬಳಿಯ ಸಾರ್ವಜನಿಕರು ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ನಾಯಕನಹಟ್ಟಿ ಹೋಬಳಿ ಘಟಕ ಅಧ್ಯಕ್ಷ ಪಿ. ಮುತ್ತಯ್ಯ ಮನವಿ ಮಾಡಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ವತಿಯಿಂದ ಪಟ್ಟಣದ ಅಂಗಡಿ ಮುಂಗಟ್ಟುಗಳ ನಾಮಫಲಕಗಳು ಅನ್ಯ ಭಾಷೆಗಳಿಂದ ರಾರಾಜಿಸುತ್ತಿವೆ ಆದ್ದರಿಂದ ಕೊಡಲೇ ಪಟ್ಟಣ ಪಂಚಾಯತಿಯ ಅಧಿಕಾರಿಗಳು ತೆರವುಗೊಳಿಸಿ, ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಅಂಗಡಿ ಮಾಲೀಕರಿಗೆ ತಿಳಿಸಬೇಕು ಮತ್ತು ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಸಿದ ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಎಂ. ಶಿವಕುಮಾರ್ ಮಾತನಾಡಿ ನಾಳೆಯಿಂದ ನಮ್ಮ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರಕಟಣೆಯ ಮೂಲಕ ಸಾರ್ವಜನಿಕರಿಗೆ ಮತ್ತು ಅಂಗಡಿ ಮಾಲೀಕರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಪ್ರತಿಕ್ರಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಹೋಬಳಿ ಘಟಕ ಅಧ್ಯಕ್ಷ ಪಿ ಮುತ್ತಯ್ಯ ಜಾಗನೂರಹಟ್ಟಿ, ನಗರ ಘಟಕ ಅಧ್ಯಕ್ಷ ಓ ತಿಪ್ಪೇಸ್ವಾಮಿ, ಗೌರವಾಧ್ಯಕ್ಷ ವಿಶ್ವನಾಥ್, ನಗರ ಘಟಕ ಉಪಾಧ್ಯಕ್ಷ ಸಿ ಎಸ್ ರಾಘವೇಂದ್ರ, ಹೋಬಳಿ ಘಟಕ ಮಾಜಿ ಅಧ್ಯಕ್ಷ ಬಿ. ತಿಪ್ಪೇಸ್ವಾಮಿ ಮಾದಯ್ಯನಹಟ್ಟಿ, ಪ್ರಧಾನ ಕಾರ್ಯದರ್ಶಿ ಕಾಟಯ್ಯ, ಯುವ ಘಟಕ ಅಧ್ಯಕ್ಷ ಸುರೇಶ್, ಹೋಬಳಿ ಘಟಕ ಉಪಾಧ್ಯಕ್ಷರಾದ ಈ. ಮಧು, ಮಂಜುನಾಥ್, ಕಾರ್ಮಿಕ ಘಟಕ ಅಧ್ಯಕ್ಷ ನಾಗರಾಜ್, ಚೌಳಕೆರೆ ಡಿ ಬಿ ಕರಿಬಸಪ್ಪ, ಕೆ ಬಿ ನಗರ ಬೋರಣ್ಣ, ಸೇರಿದಂತೆ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...