15 ದಿನದ ಬಳಿಕ ಅಕ್ರಮ ಧ್ವನಿವರ್ಧಕಗಳ ತೆರವು : ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಮಸೀದಿಗಳ ಮೇಲಿನ ಧ್ವನಿವರ್ಧಕಗಳನ್ನು ತೆಗೆಸಬೇಕೆಂದು ಶ್ರೀರಾಮಸೇನೆ ಸರ್ಕಾರಕ್ಕೇ ಗಡುವು ನೀಡಿತ್ತು. ಸರ್ಕಾರ ಮುತಾಲಿಕ್ ಅವರ ಮಾತನ್ನು ಪರಿಗಣಿಸಿರಲಿಲ್ಲ. ಹೀಗಾಗಿ ಇಂದು ರೊಚ್ಚಿಗೆದ್ದ ಮುತಾಲಿಕ್ ಆಜಾನ್ ವಿರುದ್ಧ ಸುಒ್ರಭಾತ ಘೋಷಣೆ ಮೊಳಗಿಸಿದರು. ರಾಜ್ಯದ ಹಲವು ಜಿಲ್ಲೆಗಳಲ್ಲಿ ದೇವಸ್ಥಾನಗಳಲ್ಲಿ‌ ಇಂದು ಸುಪ್ರಭಾತ ಮೊಳಗಿತ್ತು.

ಇಂದಿನ ಬೆಳವಣಿಗೆ ಕಂಡು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪೊಲೀಸರೊಟ್ಟಿಗೆ ದಿಢೀರ್ ಸಭೆ ನಡೆಸಿ, ಈ ಸಂಬಂಧ ಚರ್ಚೆ ನಡೆಸಿದ್ದರು. ಬಳಿಕ ಮಾತನಾಡಿದ ಅವರು, 15 ದಿನಗಳ ಬಳಿಕ ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗುತ್ತೆ ಎಂದಿದ್ದಾರೆ.

ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿ ಅಕ್ರಮವಾಗಿ ಅಳವಡಿಸಿರುವ ಧ್ವನಿವರ್ಧಕಗಳನ್ನು ಯಾವ ಸಮಯದಲ್ಲಿ ಬಳಸಬೇಕು ಎಂಬುದನ್ನು ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ತೆರವುಗೊಳಿಸಲಾಗುತ್ತದೆ. ಬೆಳಗ್ಗೆ ಸಮಯದಲ್ಲಿ ಒಂದು ಡೆಸಿಬಲ್, ರಾತ್ರಿ ಸಮಯದಲ್ಲಿ ಒಂದು ಡೆಸಿಬಲ್ ನಲ್ಲಿ ಧ್ವನಿವರ್ಧಕ ಬಳಸಬೇಕಾಗುತ್ತದೆ. ಇದು ಹಿಂದೂ ಧಾರ್ಮಿಕ ಮತ್ತು ಮುಸ್ಲಿಂ ಧಾರ್ಮಿಕ ಅಂತ ಅನ್ವಯಿಸುವುದಿಲ್ಲ. ಎಲ್ಲಾ ಕಾರ್ಯಕ್ರಮಗಳಲ್ಲೂ ಧ್ವನಿವರ್ಧಕ ಬಳಕೆ ಮಾಡುವಾಗ ಅನ್ವಯವಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪೊಲೀಸ್ ಅಧಿಕಾರಗಳ ಜೊತೆ ನಡೆದ ಸಭೆ ಬಳಿಕ ತಿಳಿಸಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago