Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜ. 23 ರಂದು ರಿಂದ ವಿವಿ ಸಾಗರಕ್ಕೆ ಸಿಎಂ ಮತ್ತು ಡಿಸಿಎಂ : ಕಾಂಗ್ರೆಸ್‌ನಿಂದ ಸಕಲ ಸಿದ್ದತೆ

---Advertisement---

ಸುದ್ದಿಒನ್, ಹಿರಿಯೂರು : ಜ. 23 ರಂದು ಸಿಎಂ ಮತ್ತು ಡಿಸಿಎಂ ರಿಂದ ವಿವಿ ಸಾಗರಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಹೇಳಿದೆ.

ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರವರ ಆಹ್ವಾನದ ಮೇರೆಗೆ ವಿವಿ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಸಿಎಂ ಸಿದ್ದರಾಮಯ್ಯ ನವರು ಹಾಗೂ ಡಿಸಿಎಂ ಡಿ
ಕೆ ಶಿವಕುಮಾರ್ ರವರು ಆಗಮಿಸಲ್ಲಿದ್ದು ಜಿಲ್ಲೆಯ ಎಲ್ಲಾ ಹಾಲಿ, ಮಾಜಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಆಗಮಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಕಲ ತಯಾರಿ ನಡೆಸಲಾಗಿದ್ದು ತಾಲೂಕಿನಿಂದ ಸುಮಾರು 15 ರಿಂದ 20 ಸಾವಿರ ಜನ ಸೇರುವ ನಿರೀಕ್ಷೆಯಿದೆ. ತಾಲೂಕಿನ ಎಲ್ಲಾ ಗ್ರಾಮಗಳಿಗೂ ಹಾಗೂ ಪಟ್ಟಣದ ಎಲ್ಲಾ ವಾರ್ಡ್ ಗಳಿಗೆ 600 ವಾಹನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರಸ್ತೆಯುದ್ಧಕ್ಕೂ ಬಂಟಿಂಗ್ಸ್ ಅಳವಡಿಸಲಾಗಿದ್ದು ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಆದ್ದರಿಂದ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ತಾಲೂಕಿನ ರೈತರು, ಸಾರ್ವಜನಿಕರು ಸಂಘ ಸಂಸ್ಥೆಯ ಪದಾಧಿಕಾರಿಗಳು, ವರ್ತಕರು, ಯುವಕ ಯುವತಿಯರು, ಕಾಲೇಜು ವಿದ್ಯಾರ್ಥಿಗಳು,ಪಕ್ಷದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಾಗಿನ ಮತ್ತು ಗಂಗಾ ಪೂಜೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ, ನಗರಸಭಾ ಅಧ್ಯಕ್ಷ ಅಜಯ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಜಿಪಂ ಮಾಜಿ ಸದಸ್ಯ ನಾಗೇಂದ್ರನಾಯ್ಕ, ಕಂದಿಕೆರೆ ಸುರೇಶ್ ಬಾಬು, ಗಿಡ್ಡೋಬನಹಳ್ಳಿ ಅಶೋಕ್, ಅತಾವುಲ್ಲಾ, ಮೂರ್ತಿ, ನವೀದ್, ಜಿ.ಎಲ್.ಮೂರ್ತಿ, ಅಣ್ಣೇಶ್, ಶಿವಕುಮಾರ್ ವಿ, ಗುರುಪ್ರಸಾದ್ ಮುಂತಾದವರು ಹಾಜರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...