Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಕುರ್ಚಿ ಪೈಟ್ ನಡುವೆ ಒಂದೇ ಹೆಲಿಕಾಪ್ಟರ್ ನಲ್ಲಿ ಸಿಎಂ – ಡಿಸಿಎಂ ಪ್ರಯಾಣ

---Advertisement---

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿ ಫೈಟ್ ಮುಸುಕಿನ ಗುದ್ದಾಟದಂತೆ ಆಗಿದೆ. ಹೈಕಮಾಂಡ್ ನಾಯಕರೇ ಇದಕ್ಕೊಂದು ಪರಿಹಾರ ಸೂಚಿಸಬೇಕಾಗಿದ್ದರು, ಆ ಕೆಲಸವನ್ನ ಹೈಕಮಾಂಡ್ ಮಾಡ್ತಾ ಇಲ್ಲ. ಈ ಕಡೆ ಕುರ್ಚಿ ಮೇಲೆ ಕುಳಿತುಕೊಳ್ಳುವ ಕುತೂಹಲವೂ ಕಡಿಮೆ ಆಗ್ತಿಲ್ಲ. ಈ ಫೈಟ್ ನಡುವೆ ಸಿಎಂ ಹಾಗೂ ಡಿಸಿಎಂ ಒಂದೇ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಬೆಳೆಸಿದ್ದಾರೆ.

CWC ಸಭೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಡಿಕೆ ಶಿವಕುಮಾರ್ ಅವರಿಗೆ ಇಲ್ಲ. ಇದರ ನಡುವೆ ದಾವಣಗೆರೆ ಜಿಲ್ಲಾ ಪ್ರವಾಸಕ್ಕೆ ಸಿಎಂ ಹಾಗೂ ಡಿಸಿಎಂ ಒಟ್ಟಿಗೆ ತೆರಳಿದ್ದಾರೆ. ಬೆಂಗಳೂರಿನಿಂದ ಹೆಚ್ಎಎಲ್ ಏರ್ಪೋರ್ಟ್ ನಿಂದ ತೆರಳಿದ್ದು, ಶಾಮನೂರು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಂಜೆ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಾಪಾಸ್ ಆಗಲಿದ್ದಾರೆ.

ಈಗಾಗಲೇ ಡಿಕೆ ಶಿವಕುಮಾರ್ ಅವರು ಈಗಾಗಲೇ ಒಮ್ಮೆ ದೆಹಲಿಗೆ ಹೋಗಿ ಬಂದಿದ್ದಾರೆ. ಆದರೆ ಹೈಕಮಾಂಡ್ ನಾಯಕರ ಭೇಟಿ ಸಾಧ್ಯವಾಗಿಲ್ಲ. ಈಗ CWC ಸಭೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಇದೀಹ ಡಿಕೆ ಶಿವಕುಮಾರ್ ಅವರು ಕೂಡ ಮತ್ತೆ ದೆಹಲಿಗೆ ಹೋಗುವ ಸಾಧ್ಯತೆ ಇದೆ. ಯಾಕಂದ್ರೆ ಡಿಸೆಂಬರ್ 28ರಂದು ಕಾಂಗ್ರೆಸ್ ಸಂಸ್ಥಾಪನಾ ದಿನವಿದೆ. ದೆಹಲಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಹಿರಿಯ ನಾಯಕರು ಡಿಕೆ ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದಾರೆ. ಅಂದಾದರೂ ಹೈಕಮಾಂಡ್ ನಾಯಕರ ಜೊತೆಗೆ ಮಾತುಕತೆ ನಡೆಸುತ್ತಾರಾ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now