Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೀಕರ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಸಿಎಂ ಪರಿಹಾರ ಘೋಷಣೆ..!

---Advertisement---

ಬೆಂಗಳೂರು: ಇಂದು ಕರಾಳ ಬುಧವಾರವಾಗಿದೆ. ರಾಜ್ಯದ ಎರೆಉ ಕಡೆ ನಡೆದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಒಂದಷ್ಟು ಜನರ ಸ್ಥಿತಿ ಗಂಭೀರವಾಗಿದೆ. ರಾಯಚೂರು ಭಾಗದಲ್ಲಿ ಕ್ರೂಶರ್ ಪಲ್ಟಿ ಹೊಡೆದು ವಿದ್ಯಾರ್ಥಿಗಳು ಸಾವನ್ನಪ್ಪಿದರೆ, ಪಾಪ ಜೀವನೋಪಾಯಕ್ಕಾಗಿ ತರಕಾರಿ ಹಣ್ಣು ಮಾರಲು ಹೊರಟಿದ್ದವರು ಉತ್ತರ ಕನ್ನಡದಲ್ಲಿ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡದ ಅಪಘಾತದ ಬಗ್ಗೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು ಮಾಹಿತಿ ನೀಡಿದ್ದು, 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 12 ಜನರಿಗೆ ಯಲ್ಲಾಪುರ ಸರ್ಕಾರಿ ಶಾಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಟು ಜನರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿಯೂ ಓರ್ವ ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ಈ ಅಪಘಾತಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.

ಅದರಲ್ಲೂ ವಾಹನ ಚಾಲನೆ ಮಾಡುವವರು ತುಂಬಾ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಚಾಲಕ ಒಬ್ಬ ಮಾಡುವ ನಿರ್ಲಕ್ಷ್ಯ ದೊಡ್ಡ ಪ್ರಮಾಣದ ನಷ್ಟವಾಗುತ್ತದೆ. ಎಷ್ಟೋ ಜನರ ಪ್ರಾಣವನ್ನೇ ತಿಂದುಬಿಡುತ್ತದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸೋಷಿಯಲ್ ಮೀಡಿಯಾದಲ್ಲಿ ಎಚ್ಚರಿಕೆ ನೀಡಿದ್ದಾರೆ. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...