ಚಿತ್ರದುರ್ಗ,(ನ.22) : ಹಲವು ವರ್ಷಗಳ ನಂತರ ಸಂಪೂರ್ಣ ಭರ್ತಿಯಾಗಿ, ಮೈದುಂಬಿ ಹರಿದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮೀರಾಸಾಬಿಹಳ್ಳಿ ಬಳಿಯ ರಾಣಿಕೆರೆ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಾಗಿನ ಅರ್ಪಿಸಿದರು.

ರಾಣಿ ಕೆರೆ ಈ ಬಾರಿ, ಭರ್ತಿಯಾಗಿ ಈ ಭಾಗದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಈ ಸಂದರ್ಭವನ್ನು ಐತಿಹಾಸಿಕವಾಗಿಸುವ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ರಾಣಿ ಕೆರೆಗೆ ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೆ.ಎಸ್.ಆರ್.ಟಿ.ಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ, ಶಾಸಕರಾದ ಪೂರ್ಣಿಮಾ ಶ್ರೀನಿವಾಸ, ಜಿ.ಹೆಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಶಿರಾ ಶಾಸಕ ರಾಜೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಕೆ.ಎಸ್.ನವೀನ್, ರವಿಕುಮಾರ್, ಜಿ.ಪಂ ಸಿಇಓ ಎಂ.ಎಸ್.ದಿವಾಕರ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಉಪಸ್ಥಿತರಿದ್ದರು.


