ಮೈದುಂಬಿದ ವೇದಾವತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಣೆ

1 Min Read

ಚಿತ್ರದುರ್ಗ,(ನ.22) : ಬಯಲು ಸೀಮೆಯ ಭಾಗೀರಥಿ ಎನಿಸಿದ ವೇದಾವತಿ ನದಿ ಮೈದುಂಬಿ ಹರಿದಿದ್ದಾಳೆ. ಮಧ್ಯ ಕರ್ನಾಟಕದ ಜೀವನಾಡಿ ವಾಣಿ ವಿಲಾಸಸಾಗರ ಜಲಾಶಯ ಭರ್ತಿಯಾಗಿ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಈ ಸಂದರ್ಭದವನ್ನು ಐತಿಹಾಸಿಕವಾಗಿಸುವ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ವಿ.ವಿ.ಸಾಗರ ಜಲಾಶಯದಲ್ಲಿ ಮೈದುಂಬಿದ ವೇದಾವತಿ ನದಿಗೆ ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,  ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೆ.ಎಸ್.ಆರ್.ಟಿ. ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ, ಶಾಸಕರಾದ ಪೂರ್ಣಿಮಾ ಶ್ರೀನಿವಾಸ, ಜಿ.ಹೆಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಶಿರಾ ಶಾಸಕ ರಾಜೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಕೆ.ಎಸ್.ನವೀನ್, ರವಿಕುಮಾರ್, ಜಿ.ಪಂ ಸಿಇಓ ಎಂ.ಎಸ್.ದಿವಾಕರ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಜಿಲ್ಲಾ ನೀರಿವಾರಿ ಹೋರಾಟ ಸಮಿತಿ ಸದಸ್ಯರು, ರೈತರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *