Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಬೊಮ್ಮಾಯಿ ನಾಳೆ ದೆಹಲಿ ಪ್ರವಾಸ : ಸಚಿವಾಕಾಂಕ್ಷಿಗಳಿಗೆ ಸಿಗುತ್ತಾ ಸಿಹಿ ಸುದ್ದಿ..?

Facebook
Twitter
Telegram
WhatsApp

 

ಬೆಂಗಳೂರು: ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳುವ ಸಾಧ್ಯತೆ ಇದ್ದು, ವರಿಷ್ಠರ ಜೊತೆ ಮಹತ್ವದ ಚರ್ಚೆ ಮಾಡಲಿದ್ದಾರೆ. ಪಕ್ಷದ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಷಾರನ್ನ ಭೇಟಿ ಮಾಡುವ ಸಾಧ್ಯತೆ ಇದೆ. ಸಿಎಂ ಆದ ನಂತರ 11 ನೇ ಬಾರಿ ದೆಹಲಿಗೆ ತೆರಳುತ್ತಿರುವ ಸಿಎಂ, ಅವರ ದೆಹಲಿ‌ ಪ್ರವಾಸ ಸಹಜವಾಗಿಯೇ ಕುತೂಹಲ ಮೂಡಿಸಿದೆ.

ಸಿಎಂ ದೆಹಲಿಗೆ ಪ್ರಯಾಣ ಬೆಳೆಸುತ್ತಿರುವ ಬೆನ್ನಲ್ಲೆ ಮತ್ತೆ ಸಚಿವ ಸಂಪುಟ ವಿಸ್ತರಣೆ, ಪುನರಚನೆ ಚರ್ಚೆ ಗರಿಗೆದರಿದೆ. ಪ್ರಧಾನಿ ಮೋದಿ ರಾಜ್ಯಕ್ಕೆ ಬಂದು ಹೋದ ನಂತರ ಸಿಎಂ ದೆಹಲಿಗೆ ತೆರಳುತ್ತಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿ‌ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಚುನಾವಣೆ ಬೇರೆ ಸಮೀಪಿಸುತ್ತಿದೆ. ಇಂಥ ಸಮಯದಲ್ಲೂ ಸಚಿವ ಸಂಪುಟ ಹಾಗೆ ಬಿಡುವುದಕ್ಕಿಂತ ಮುಂದುವರೆಯುವ ಯೋಜನೆಯಲ್ಲಿದ್ದಾರೋ ಏನೋ.

ಒಟ್ಟಾರೆ ಸಚಿವಕಾಂಕ್ಷಿಗಳು ಪಟ್ಟಿ ಕೂಡ ಸಾಕಷ್ಟು ದೊಡ್ಡದಾಗಿದೆ. ಹೀಗಾಗಿ ಅದ್ಯಾವಾಗ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯಾಗುತ್ತೋ ಎಂದು ಕುತೂಹಲದ ಕಣ್ಗಳಲ್ಲಿ ಕಾಯುತ್ತಿರುವವರಿಗೆ ಈ ಸಲದ ಸಿಎಂ ಭೇಟಿ ಶುಭ ಸುದ್ದಿ‌ ನೀಡುತ್ತಾ ಎಂಬುದನ್ನು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!