ಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದವರ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹೇಳಿದರು.
ಈ ವೇಳೆ ತಮ್ಮ ಅಭ್ಯರ್ಥಿ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ಉಣ್ಣೆ ಕಂಬಳಿಯನ್ನು ಯಾರು ಬೇಕಾದರೂ ಹಾಕಿಕೊಂಡರೆ ಯೋಗ್ಯತೆ ಬರುವುದಿಲ್ಲ. ಹಾಲುಮತದ ಸಮಾಜಕ್ಕೆ ಸರಿಯಾದ ಅಭಿವೃದ್ಧಿ ಮಾಡಿದವರಿಗೆ ಮಾತ್ರ ಆ ಯೋಗ್ಯತೆ ಪ್ರಾಪ್ತವಾಗುತ್ತದೆ. ದಾಸಶ್ರೇಷ್ಠರಾದ ಕನಕದಾಸರ ಜನ್ಮಸ್ಥಳ ಬಾಡ ಹಾಗೂ ಅವರ ಕರ್ಮಭೂಮಿ ಕಾಗಿನೆಲೆಯನ್ನು ಬಿ.ಜೆ.ಪಿ.ಅಧಿಕಾರದ ಅವಧಿಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎಂದರು.
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು ಈ ಭಾಗದಲ್ಲಿ ನೀರಾವರಿ, ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿ ಹಾಗೂ ವಸತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸರ್ಕಾರವು ಈ ವರ್ಷ ಹೆಚ್ಚುವರಿಯಾಗಿ 5ಲಕ್ಷ ಮನೆಗಳನ್ನು ನಿರ್ಮಿಸಲು ಯೋಜಿಸಿದ್ದು, ಸಿಂದಗಿ ಕ್ಷೇತ್ರಕ್ಕೆ 5ಸಾವಿರ ಮನೆ ನೀಡಲಾಗುತ್ತದೆ. ಅಮೃತ ಯೋಜನೆಯಡಿಯಲ್ಲಿ 2 ಸಾವಿರ ಮನೆ ನಿರ್ಮಿಸಲಾಗುವುದುಲಾಗುವುದು. ಹೀಗೆ ಒಟ್ಟು 1ವರ್ಷದಲ್ಲಿ ಸಿಂದಗಿ ಕ್ಷೇತ್ರದಲ್ಲಿ 7ಸಾವಿರ ಮನೆ ನಿರ್ಮಿಣ ಮಾಡಲಾಗುವುದು ಎಂದರು.
ಚಿಮ್ಮಲಗಿ ಏತ ನೀರಾವರಿ ಅಡಿ ಬರುವ ಕೋರವಾರ್ ಉಪಕಾಲುವೆ ಟೆಂಡರ್ ಈಗಾಗಲೇ ಪೂರ್ಣಗೊಂಡಿದೆ. ಇದರಿಂದ ಎಂಬತ್ತು ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿ ಸಲಾಗುತ್ತದೆ. ಇಂಡಿ ಮತ್ತು ಗುತ್ತಿ ಬಸವಣ್ಣ ಯೋಜನೆಗಳ ಪುನಃಶ್ಚೇತನ ಮಾಡಲಾಗುತ್ತಿದೆ ಎಂದು ಕೇಳಿದರು. ಎಲ್ಲಿದೆ ಸಾಮಾಜಿಕ ನ್ಯಾಯ ಸಾಮಾಜಿಕ ನ್ಯಾಯದ ಹರಿಕಾರರಾದ ಕಾಂಗ್ರೆಸ್ ಪಕ್ಷ ಯಾರಿಗೂ ಸಾಮಾಜಿಕ ನ್ಯಾಯ ಕಲ್ಪಿಸಿಲ್ಲ. ಸಂವಿಧಾನ ನೀಡಿದ ಬಾಬಾಸಾಹೇಬ್ ಅಂಬೇಡ್ಕರ್ ಗೆ ದೇಶ ಸದಾ ಋಣಿಯಾಗಿರಬೇಕು. ಆದರೆ ಅವರ ವಿರುದ್ಧ ಶ್ರೀಮಂತರನ್ನು ನಿಲ್ಲಿಸಿ ಚುನಾವಣೆಯಲ್ಲಿ ಸೋಲಿಸಲಾಯಿತು.