ನಟ ರಿಷಬ್ ಶೆಟ್ಟಿ ರಾಜಕೀಯಕ್ಕೆ ಬರುವ ಸಾಧ್ಯತೆ ಇದೆ ಎಂದು ಹಲವು ದಿನಗಳಿಂದಾನೂ ಚರ್ಚೆ ನಡೆಯುತ್ತಲೆ ಇದೆ. ಅದಕ್ಕೆ ಈಗಾಗಲೇ ರಿಷಬ್ ಶೆಟ್ಟಿ ಕೂಡ ಉತ್ತರ ನೀಡಿದ್ದಾರೆ. ಈಗ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜೊತೆಗಿರುವ ಫೋಟೋವೊಂದು ವೈರಲ್ ಆಗಿದ್ದು, ಮತ್ತೆ ರಾಜಕೀಯ ಸೇರ್ಪಡೆ ವಿಚಾರ ಸದ್ದು ಮಾಡ್ತಾ ಇದೆ.
ಕೊಲ್ಲೂರು ಮೂಕಾಂಭಿಕ ದೇವಸ್ಥಾನದಲ್ಲಿ ಸಿಎಂ ಬೊಮ್ಮಾಯಿ ಹಾಗೂ ರಿಷಬ್ ಶೆಟ್ಟಿ ಅವರು ಭೇಟಿ ಮಾಡಿದ್ದಾರೆ. ಈ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಸುದೀಪ್ ಬೆಂಬಲ ಘೋಷಿಸಿದ ಬೆನ್ನಲ್ಲೇ ರಿಷಬ್ ಶೆಟ್ಟಿ ಅವರು ಬೆಂಬಲ ನೀಡುತ್ತಾರೆ ಎಂಬ ಚರ್ಚೆ ಶುರುವಾಗಿದೆ.
ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ರಿಷಬ್ ಶೆಟ್ಟಿ ಕೊಲ್ಲೂರಿಗೆ ಬಂದಿರುವ ವಿಚಾರ ನನಗೆ ಗೊತ್ತಿರಲಿಲ್ಲ. ನನಗೆ ಅವರು ಮೊದಲಿನಿಂದಲೂ ಒಳ್ಳೆಯ ಸ್ನೇಹಿತರು. ನಮ್ಮ ಸಿದ್ಧಾಂತಕ್ಕೆ ಹತ್ತಿರ ಇರುವವರು. ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳುವ ಯಾವುದೇ ಪ್ಲ್ಯಾನ್ ಇಲ್ಲ ಎಂದಿದ್ದಾರೆ.