ಬೆಂಗಳೂರು: ಸಿಎಂ ಬೊಮ್ಮಾಯಿಯಿಂದ ಸಾಲುಮರದ ತಿಮ್ಮಕ್ಕಳಿಗೆ ಬಿಡಿಎ ನಿವೇಶನ ಮಂಜೂರು ಮಾಡಲಾಗಿದೆ. ಇತ್ತೀಚೆಗೆ ಸಾಲುಮರದ ತಿಮ್ಮಕ್ಕ ಅವರು ಸಿಎಂ ಭೇಟಿ ಮಾಡಿದ್ದರು. ಸಿಎಂ ಸೂಚನೆ ಮೇರೆಗೆ ಬಿಡಿಎ, ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕನಿಗೆ ನೀಡಿದೆ.
ಸ್ವತಃ ಸಿಎಂ ಬೊಮ್ಮಾಯಿ ಅವರೇ ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಕ್ರಯಪತ್ರ ಹಸ್ತಾಂತರಿಸಿದ್ದಾರೆ. ಇಂದು ಮುಂಜಾನೆ ರೇಸ್ ಕೋರ್ಸ್ ನಿವಾಸದಲ್ಲಿ ಹಸ್ತಾಂತರ ಮಾಡಿದ್ದಾರೆ. ಸಾಲುಮರದ ತಿಮ್ಮಕ್ಕ, ಪುತ್ರನಿಗೆ ಕರಾರು ಪತ್ರ ನೀಡಲಾಗಿದೆ.
ನಾಡಪ್ರಭು ಕೆಂಪೇಗೌಡ ಬಡಾವಣೆಯ ೭ ನೇ ಬ್ಲಾಕ್ ಜೆ ಸೆಕ್ಟರ್ ನಲ್ಲಿ ನಿವೇಶನ ಹಂಚಿಕೆಯಾಗಿದೆ. ಒಟ್ಟು 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಮಗ ಉಮೇಶ್ ಸಾಲುಮರದ ತಿಮ್ಮಕ್ಕರ ಜೊತೆಗೆ ಇದ್ದು ನೋಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಮನೆಯಲ್ಲಿಯೇ ಕಾಲು ಜಾರಿ ಬಿದ್ದು ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು ತಿಮ್ಮಕ್ಕ. ಸದ್ಯ ಆರೋಗ್ಯದಿಂದ ಇದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…