ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸಿಎಂ ಯಡಿಯೂರಪ್ಪ ಅವರು 500 ಕೋಟಿ ಅನುದಾನವನ್ನು ನೀಡಿದ್ದಾರೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಡ ಹೇರಿದ್ದರು. ಈ ಒತ್ತಡಕ್ಕೆ ಮಣಿದ ಯಡಿಯೂರಪ್ಪನವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವಾರದ ಹಿಂದೆ ಆದೇಶ ನೀಡಿದ್ದರು.
ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಕಟ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನ ಸ್ಥಾಪಿಸಲಾಗಿದೆ. ಅದರಂತೆ ಈ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂಪಾಯಿ ಹಣವನ್ನ ಒದಗಿಸಲಾಗುವುದು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
