ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ರಾಜಕೀಯ ಚರ್ಚೆ ಮತ್ತೆ ಜೋರಾಗಿದೆ. ಹೈಕಮಾಂಡ್ ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಕರೆಯಬಹುದು ಎಂಬ ಸುದ್ದಿಗಳ ನಡುವೆ, ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿ ಕುತೂಹಲ ಹೆಚ್ಚಿಸಿದ್ದಾರೆ.
ಮೇ 24ರ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ, ಅದಕ್ಕೂ ಮುನ್ನವೇ ರಾಜ್ಯ ನಾಯಕತ್ವ ವಿವಾದ, ಸಂಪುಟ ಪುನರ್‌ರಚನೆ ಹಾಗೂ ಆಡಳಿತಾತ್ಮಕ ಬದಲಾವಣೆಗಳ ಬಗ್ಗೆ ಹೈಕಮಾಂಡ್ ಚರ್ಚೆ ನಡೆಸಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣದ ನಾಯಕರು ಪ್ರತ್ಯೇಕ ಸಭೆಗಳನ್ನು ನಡೆಸುತ್ತಿರುವುದು ರಾಜಕೀಯ ಚಟುವಟಿಕೆಗೆ ಮತ್ತಷ್ಟು ಇಂಧನ ನೀಡಿದೆ.ಈ ಬೆಳವಣಿಗೆಗಳ ಮಧ್ಯೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, “ನಾನಾಗಿಯೇ ದೆಹಲಿಗೆ ಹೋಗುವುದಿಲ್ಲ. ವರಿಷ್ಠರು ಕರೆದಾಗ ಮಾತ್ರ ಹೋಗುತ್ತೇನೆ. ದೆಹಲಿಗೆ ಕರೆಯುವುದಾಗಿ ಹೇಳಿದ್ದಾರೆ. ಕರೆದಾಗ ಹೋಗಿ, ಕೇಳಬೇಕಾದ ವಿಷಯಗಳನ್ನು ಕೇಳುತ್ತೇನೆ” ಎಂದು ಸ್ಪಷ್ಟಪಡಿಸಿದರು.
ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ಕಾಂಗ್ರೆಸ್ ಒಳರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಒಂದು ಕಡೆ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳು ಗರಿಗೆದರಿದ್ದರೆ, ಮತ್ತೊಂದೆಡೆ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲವೂ ಹೆಚ್ಚಾಗಿದೆ.
ಇದಕ್ಕೂ ಮುನ್ನ ರಾಜ್ಯ ಕಾಂಗ್ರೆಸ್‌ನಲ್ಲಿ ‘ಎರಡೂವರೆ ವರ್ಷ ಸಿದ್ದರಾಮಯ್ಯ, ನಂತರ ಡಿಕೆ ಶಿವಕುಮಾರ್’ ಎಂಬ ಪವರ್ ಶೇರಿಂಗ್ ಫಾರ್ಮುಲಾ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಆದರೆ ಇದುವರೆಗೆ ಪಕ್ಷದ ಹೈಕಮಾಂಡ್ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಈಗ ಮತ್ತೆ ದೆಹಲಿ ಮಟ್ಟದ ಮಾತುಕತೆಗಳ ಸುದ್ದಿ ಹೊರಬಿದ್ದಿರುವುದು ರಾಜಕೀಯ ವಲಯದಲ್ಲಿ ಹೊಸ ಲೆಕ್ಕಾಚಾರಗಳಿಗೆ ಕಾಶಿವಕುಮಾರ್
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















