Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಿಎಂ ಸಂತಾಪ : ಅಂತ್ಯಕ್ರಿಯೆ ಮಾಹಿತಿ ಇಲ್ಲಿದೆ

---Advertisement---

ಬೆಳಗಾವಿ: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ್ದಾರೆ. ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿಯಾಗಿದ್ದರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ಮಂಡಿಸಲಾದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಅವರು ಮಾತನಾಡಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ತಮ್ಮ 63ನೇ ವಯಸ್ಸಿನ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಾಲ ರಾಜಕೀಯದಲ್ಲಿದ್ದವರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಬಾಪೂಜಿ ವುದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಕಾಶಿಯಾಗಿಸಿದವರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಜವಳಿ ಕ್ಷೇತ್ರದಲ್ಲಿ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ತಂದುಕೊಟ್ಟವರು ಶಾಮನೂರು ಎಂದರು.

ಇನ್ನು ಶಾಮನೂರು ಶಿವಶಂಕರಪ್ಪ ಅವರ ಅಂತ್ಯ ಸಂಸ್ಕಾರ ಇಂದು ನಡೆಯಲಿದೆ. 4.30ರ ನಂತರ ಅಂತ್ಯಸಂಸ್ಕಾರ ನಡೆಯಲಿದ್ದು, ದಾವಣಗೆರೆಯ ಶಿವಶಂಕರಪ್ಪ ಅವರ ಒಡೆತನದ ಕಲ್ಲೇಶ್ವರ ಮಿಲ್ ನಲ್ಲಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ಅಂತ್ಯಸಂಸ್ಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸರ್ಕಾರ ಸೂಚನೆ ನೀಡಿದೆ. ಜೊತೆಗೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಪೂಜೆ – ಪುನಸ್ಕಾರಗಳು ನೆರವೇರಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now