ಸುದ್ದಿಒನ್,ಬೆಂಗಳೂರು,ಜೂನ್.04: ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ ಸಿಕ್ಕಿದೆ. ಹಲವು ವರ್ಷಗಳಿಂದ ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಇದೀಗ ಹೊಸ ಆಶಾಕಿರಣ ಕಾಣಿಸಿದೆ. ರಾಜ್ಯದಲ್ಲಿ ಒಟ್ಟು 56,432 ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್, ತಮ್ಮ ಮೊದಲ ಸಚಿವ ಸಂಪುಟ ಸಭೆಯ ಬಳಿಕ ಈ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಘೋಷಣೆಯಾಗಿದ್ದ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಿ ಪೂರ್ಣಗೊಳಿಸುವ ನಿರ್ಧಾರಕ್ಕೆ ಸರ್ಕಾರ ಬಂದಿದೆ.
ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸ್ಪಷ್ಟ ಕಾರ್ಯಯೋಜನೆ ರೂಪಿಸಿ ಸಾರ್ವಜನಿಕರಿಗೆ ಪ್ರಕಟಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನೇಮಕಾತಿ ಪ್ರಕ್ರಿಯೆ ಯಾವಾಗ ಆರಂಭವಾಗಲಿದೆ, ಅಧಿಸೂಚನೆಗಳು ಯಾವ ದಿನಾಂಕದಲ್ಲಿ ಹೊರಬೀಳಲಿವೆ ಹಾಗೂ ವಿವಿಧ ಹಂತಗಳು ಹೇಗೆ ನಡೆಯಲಿವೆ ಎಂಬ ಮಾಹಿತಿಯನ್ನು ಒಳಗೊಂಡ ಸಂಪೂರ್ಣ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ.
ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಇದುವರೆಗೆ ನೇಮಕಾತಿ ಪ್ರಕ್ರಿಯೆಗೆ ಅಡ್ಡಿಯಾಗಿದ್ದ ತಾಂತ್ರಿಕ ಹಾಗೂ ಕಾನೂನು ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬಾಕಿ ಉಳಿದಿರುವ 56,432 ಹುದ್ದೆಗಳ ನೇಮಕಾತಿ ಕುರಿತು ಎಲ್ಲಾ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಮುಂದಿನ ಸಚಿವ ಸಂಪುಟ ಸಭೆಯೊಳಗೆ ಸಂಪೂರ್ಣ ‘ಕ್ಯಾಲೆಂಡರ್ ಆಫ್ ಈವೆಂಟ್ಸ್’ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಇದರಿಂದ ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಒಂದೇ ಸ್ಥಳದಲ್ಲಿ ಲಭ್ಯವಾಗಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












