Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನಕಪುರ ಹಾಸ್ಟೆಲ್ ಗೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ; ವಿದ್ಯಾರ್ಥಿಗಳೊಂದಿಗೆ ಊಟ ಸವಿದು ಸೌಲಭ್ಯ ಪರಿಶೀಲನೆ

---Advertisement---

ಕನಕಪುರ.ಸೆಪ್ಟೆಂಬರ್.14: ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಕಾಲೇಜಿನ ಬಾಲಕರ ವಿದ್ಯಾರ್ಥಿನಿಲಯಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭೇಟಿಯ ವೇಳೆ ವಿದ್ಯಾರ್ಥಿನಿಲಯದ ಊಟದ ಗುಣಮಟ್ಟವನ್ನು ಸ್ವತಃ ಪರಿಶೀಲಿಸಲು ವಿದ್ಯಾರ್ಥಿಗಳ ಸಾಲಿನಲ್ಲಿ ಕುಳಿತು ಅವರೊಂದಿಗೆ ಊಟ ಸವಿದರು. ಬಳಿಕ ಹಾಸ್ಟೆಲ್‌ನ ಕೊಠಡಿಗಳು, ಶುಚಿತ್ವ ಹಾಗೂ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ವೀಕ್ಷಿಸಿದರು. ವಿದ್ಯಾರ್ಥಿಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸಿದ ಅವರು, ಉಚಿತ ಬಸ್ ಪಾಸ್, ವಿದ್ಯಾರ್ಥಿವೇತನ (ಸ್ಕಾಲರ್‌ಶಿಪ್‌) ಹಾಗೂ ವಸತಿ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿರುವ ಬಗ್ಗೆ ಮಾಹಿತಿ ಪಡೆದರು.

ಈ ವಿದ್ಯಾರ್ಥಿನಿಲಯದಲ್ಲಿ ಕಲಬುರಗಿ, ರಾಯಚೂರು, ಹಾವೇರಿ, ಬೀದರ್ ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಬಂದ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಹಾಸ್ಟೆಲ್‌ನಲ್ಲಿರುವ ಕೆಲವು ಮೂಲಭೂತ ಕೊರತೆಗಳ ಬಗ್ಗೆ ಸಿಬ್ಬಂದಿ ವರ್ಗದವರು ಗಮನಕ್ಕೆ ತಂದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು, ಜಿಲ್ಲಾಧಿಕಾರಿಗಳು (ಡಿಸಿ) ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರೊಂದಿಗೆ ಚರ್ಚಿಸಿ ಸ್ಥಳ ಪರಿಶೀಲನೆ ನಡೆಸಿ, ಅಗತ್ಯವಿರುವ ಎಲ್ಲಾ ನೆರವು ಮತ್ತು ಸುಧಾರಿತ ಸೌಲಭ್ಯಗಳನ್ನು ಶೀಘ್ರವೇ ಒದಗಿಸುವುದಾಗಿ ಭರವಸೆ ನೀಡಿದರು.

“ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಸೂಕ್ತ ವಾತಾವರಣ ಕಲ್ಪಿಸಿ ಅವರ ಉಜ್ವಲ ಭವಿಷ್ಯವನ್ನು ರೂಪಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ” ಎಂದು ಈ ಸಂದರ್ಭದಲ್ಲಿ ತಿಳಿಸಿದರು.

 

 

Join WhatsApp

Join Now

Join Telegram

Join Now