ಬೆಂಗಳೂರು.ಸೆಪ್ಟೆಂಬರ್.10 : ‘ದೃಢ ಕರ್ನಾಟಕದ ಸಂಕಲ್ಪ ಸಮಾರಂಭದಲ್ಲಿ ಸಿಎಂ ಡಿ.ಕೆ. ಶಿವಕುಮಾರ್, ಸಚಿವರು, ಅಧಿಕಾರಿ ಬಳಗದೊಂದಿಗೆ ನಾಡಿನ ರೈತರು, ಶ್ರಮಿಕರು, ಯುವಜನತೆ ಹಾಗೂ ಗ್ಯಾರಂಟಿ ಫಲಾನುಭವಿಗಳೊಂದಿಗೆ ಒಂದೇ ಪಂಕ್ತಿಯಲ್ಲಿ ಕುಳಿತು ಸಹಭೋಜನ ಸವಿದಿದ್ದಾರೆ.
ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರವು 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿರುವ ‘ದೃಢ ಕರ್ನಾಟಕದ ಸಂಕಲ್ಪ ಸಮಾರಂಭ ನಡೆದಿದ್ದು, ಸಮಾರಂಭದ ಬಳಿಕ ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವರು ಹಾಗೂ ಅಧಿಕಾರಿ ಬಳಗದೊಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ನಾಡಿನ ರೈತರು, ಶ್ರಮಿಕರು, ಯುವಜನತೆ ಮತ್ತು ಗ್ಯಾರಂಟಿ ಫಲಾನುಭವಿಗಳೊಂದಿಗೆ ಒಂದೇ ಪಂಕ್ತಿಯಲ್ಲಿ ಕುಳಿತು ಸಹಭೋಜನ ಸವಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಸಚಿವ ಸಂಪುಟದ ಸದಸ್ಯರು ಜನಸಾಮಾನ್ಯರ ಸಮ್ಮುಖದಲ್ಲಿ ಈ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದರು.
ಸೇವೆ ಒನ್: ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ ಹಾಗೂ ಪಾರದರ್ಶಕವಾಗಿ ಮನೆಬಾಗಿಲಿಗೆ ತಲುಪಿಸುವ ಡಿಜಿಟಲ್ ವ್ಯವಸ್ಥೆ.
ರೈತ ಚೈತನ್ಯ: ಅನ್ನದಾತರ ಆರ್ಥಿಕ ಸ್ಥಿರತೆ ಮತ್ತು ಸಮಗ್ರ ಅಭಿವೃದ್ಧಿಗೆ ಅಗತ್ಯ ಬೆಂಬಲ ನೀಡಿ ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ ತುಂಬುವ ಯೋಜನೆ.
ಶಾಲೆಗಳ ಸಿಎಸ್ಆರ್ ಪೋರ್ಟಲ್: ಸರ್ಕಾರಿ ಶಾಲೆಗಳ ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟವನ್ನು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿ ಸಹಯೋಗದೊಂದಿಗೆ ಮೇಲ್ದರ್ಜೆಗೇರಿಸುವ ವಿನೂತನ ಪೋರ್ಟಲ್.
ಉಚಿತ ಬಸ್ ಪಾಸ್: ವಿದ್ಯಾರ್ಥಿಗಳಿಗೆ ಹಾಗೂ ಅಗತ್ಯ ವರ್ಗದ ನಾಗರಿಕರಿಗೆ ಸುಲಭ ಸಂಚಾರ ಸೌಲಭ್ಯ ಕಲ್ಪಿಸುವ ಯೋಜನೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಸಚಿವರು ಹಾಗೂ ಅಧಿಕಾರಿ ಬಳಗದೊಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ನಾಡಿನ ರೈತರು, ಶ್ರಮಿಕರು, ಯುವಜನತೆ ಮತ್ತು ಗ್ಯಾರಂಟಿ ಫಲಾನುಭವಿಗಳೊಂದಿಗೆ ಒಂದೇ ಪಂಕ್ತಿಯಲ್ಲಿ ಕುಳಿತು ಸಹಭೋಜನ ಸವಿದರು. pic.twitter.com/FOWbm00dHS
— CM of Karnataka (@CMofKarnataka) September 10, 2026












