ಚಿತ್ರದುರ್ಗ. ನ. 20: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇದೇ ನವೆಂಬರ್ 21ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 12ಕ್ಕೆ ಹಿರಿಯೂರು ನಗರದ ಹುಳಿಯಾರು ರಸ್ತೆಯ ವೇದಾವತಿ ವಿಜ್ಞಾನ ಕಾಲೇಜು ಹಿಂಭಾಗದ ತಾಲ್ಲೂಕು ಕ್ರೀಡಾಂಗಣಕ್ಕೆ ಆಗಮಿಸುವರು.
ನಂತರ ಹಿರಿಯೂರು ನಗರದ ನೆಹರು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಮಚಾಯತ್ ವತಿಯಿಂದ ಹಮ್ಮಿಕೊಂಡಿರುವ ಪ್ರಜಾಸೇವೆ ಅಭಿಯಾನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 4ಕ್ಕೆ ಹಿರಿಯೂರು ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 5ಕ್ಕೆ ಹಿರಿಯೂರು ತಾಲ್ಲೂಕು ಕ್ರೀಡಾಂಗಣ ಹೆಲಿಪ್ಯಾಡ್‍ನಿಂದ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್.ಶ್ರೀಧರ್ ತಿಳಿಸಿದ್ದಾರೆ.
===========











