Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವ ತನಕ ಸಿಎಂ, ಡಿಸಿಎಂ, ಗೃಹ ಸಚಿವರು ಕತ್ತೆ ಕಾಯ್ತಾ ಇದ್ರಾ..? ಪ್ರಹ್ಲಾದ್ ಜೋಶಿ ಪ್ರಶ್ನೆ…!

Facebook
Twitter
Telegram
WhatsApp

 

 

ಕಲಬುರಗಿ: ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪಾಸ್ ಪೋರ್ಟ್ ರದ್ದು ಪಡಿಸಿದರೆ ಅವೆಉ ದೇಶಕ್ಕೆ ವಾಪಾಸ್ ಆಗಲೇಬೇಕು. ಹೀಗಾಗಿ ವಿದೇಶಾಂಗ ಸಚಿವಾಲಯ ಮಧ್ಯ ಪ್ರವೇಶಿಸಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ವಿಚಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಮೇಲೆ ಗರಂ ಆಗಿದ್ದಾರೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಕೋರ್ಟ್ ನಲ್ಲಿ ಅರ್ಜಿ ಹಾಕಬೇಕು. ಅದರದ್ದೇ ಆದ ಪ್ರಕ್ರಿಯೆಗಳು ಇರುತ್ತವೆ ಎಂದಿದ್ದಾರೆ.

 

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಜಿ ಪರಮೇಶ್ವರ್ ಅವರು ನನ್ನ ಪ್ರಶ್ನೆಗಳಿಗೆ ಉತ್ತರ ನೀಡಿಲ್ಲ. ಪೆನ್ ಡ್ರೈವ್ ಪ್ರಕರಣ ಹೊರಗೆ ಬಂದಿದ್ದು ಏಪ್ರಿಲ್ 21ರಂದು. ಆದರೆ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದು, ಏಪ್ರಿಲ್ 27ಕ್ಕೆ. ಹಾಗಾದರೆ ಅಲ್ಲಿಯವರೆಗೂ ಇವರೇನು ಕತ್ತೆ ಕಾಯುತ್ತಿದ್ದರಾ..? ವಿದೇಶಕ್ಕೆ ಹೋದವರನ್ನು ಕರೆತರಲು ಪ್ರಕ್ರಿಯೆಗಳಿವೆ. ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲು ಕೇಂದ್ರ ತಯಾರಿದೆ. ಪತ್ರ ಬರೆದ ಕೂಡಲೇ ಪಾಸ್ ಪೋರ್ಟ್ ರದ್ದಾಗಬೇಕು ಎಂದರೆ ಹೇಗೆ..? ಈ ಪ್ರಕರಣವನ್ನು ಬಿಜೆಪಿ ಮೇಲೆ ಹಾಕುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ.

 

ಒಕ್ಕಲಿಗರ ಮತಗಳ ಮೇಲೆ ಕಣ್ಣಿಟ್ಟಿದ್ದು, ಚುನಾವಣೆ ಮುಗಿಯುವ ತನಕ ಏನು ಮಾಡಿಲ್ಲ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಇದೊಂದು ಗಂಭೀರ ಪ್ರಕರಣ. ಪ್ರಜ್ವಲ್ ವಿಚಾರಣೆ ಎದುರಿಸಬೇಕು. ಅವರು ತಪ್ಪು ಮಾಡಿದ್ದರೆ ಕಠಿಣ ಶಿಕ್ಷೆಯಾಗಲಿ. ಇದರಲ್ಲಿ ಯಾವುದೇ ಅನುಕಂಪ ಇಲ್ಲವೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜಿ.ಎಸ್.ಮಂಜುನಾಥ್ ಅಧಿಕಾರ ಸ್ವೀಕಾರ

ಸುದ್ದಿಒನ್, ಚಿತ್ರದುರ್ಗ, ಜೂ.24‌:  ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕವಾದ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಅವರು ಬೆಂಗಳೂರಿನ ಯೂನಿಟಿ ಬಿಲ್ಡಿಂಗ್‍ನಲ್ಲಿರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸೋಮವಾರ ಅಧಿಕಾರ

ರೇಣುಕಾಸ್ವಾಮಿ ಕೊಲೆ ಕೇಸ್ : ನಾಲ್ವರು ತುಮಕೂರು ಜೈಲಿಗೆ ಶಿಫ್ಟ್.. ಯಾಕೆ ಗೊತ್ತಾ..?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ಸೇರಿದಂತೆ ಹದಿನೇಳು ಜನ ಜೈಲುಪಾಲಾಗಿದ್ದಾರೆ. ಶನಿವಾರ ನಾಲ್ವರ ಕಸ್ಟಡಿ ಅಂತ್ಯವಾದ ಹಿನ್ನೆಲೆ ಎಲ್ಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ಇದೀಗ ಹೊಸ ಬೆಳವಣಿಗೆ ಏನು ಅಂದ್ರೆ ಹದಿನೇಳು

ಪವಿತ್ರಾ ಗೌಡ ಮನೆ ತೆಗೆದುಕೊಳ್ಳಲು 2 ಕೋಟಿ ಕೊಟ್ಟಿರುವ ಮೃತ ನಿರ್ಮಾಪಕ ಸೌಂದರ್ಯ ಜಗದೀಶ್..!

  ಬೆಂಗಳೂರು: ಅತ್ತ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್.. ಇತ್ತ ರೇಣುಕಾಸ್ವಾಮಿ ಕೊಲೆ ಕೇಸ್. ಎರಡು ತನಿಖೆಯ ಹಂತದಲ್ಲಿಯೇ ಇದೆ. ಇದೀಗ ಸೌಂದರ್ಯ ಜಗದೀಶ್ ಹಾಗೂ ಪವಿತ್ರಾ ಗೌಡ ನಡುವೆ ಕೋಟಿ ಕೋಟಿ

error: Content is protected !!