Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ವಿಚಾರದಲ್ಲಿ ಸಿಎಂ, ಡಿಸಿಎಂ ಜಟಾಪಟಿ : ಸಿದ್ದರಾಮಯ್ಯ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಸದ್ಯ ರಾಜ್ಯದಲ್ಲಿ ಬಹುಮತ ಪಡೆದು ಕಾಂಗ್ರೆಸ್ ಸರ್ಕಾರ ಆಡಳಿತದ ಚುಕ್ಕಾಣಿ‌ ಹಿಡಿದಿದೆ. ಸಿದ್ದರಾಮಯ್ಯ ಸಂಪುಟವೂ ತುಂಬಿದೆ. ಆದರೆ ಈಗಲೂ ಅಸಮಾಧಾನಿತರು ಕಾಣಸಿಗುತ್ತಾರೆ. ಎಲ್ಲರಿಗೂ ಸಚಿವ ಸ್ಥಾನ ಕೊಡಲು ಕಷ್ಟ ಸಾಧ್ಯ ಎಂಬ ಕಾರಣಕ್ಕೇನೆ ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ನೀಡಲಾಗುತ್ತದೆ. ಇದೀಗ ಅದೇ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದೆ.

 

ಶಾಸಕರು ಮತ್ತು ಎಂಎಲ್ಸಿಗಳನ್ನು ಆಯ್ಕೆ ಮಾಡಲು ಸಿದ್ದರಾಮಯ್ಯ ಲೀಸ್ಟ್ ಹಿಡಿದು ಕುಳಿತುಕೊಂಡರೆ, ಕಾರ್ಯಕರ್ತರಿಗೆ ನೀಡಬೇಕೆಂದು ಡಿಕೆ ಶಿವಕುಮಾರ್ ಪಟ್ಟು ಹಿಡಿದು ಕೂತಿದ್ದಾರೆ. ಇಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಬೆಂಗಳೂರಿಗೆ ಭೇಟಿ ನೀಡಿದ್ದು, ಸಭೆಯಲ್ಲಿ ಈ ಸಂಬಂಧ ಚರ್ಚೆ ಮಾಡುವ ಸಾಧ್ಯತೆ ಇದೆ.

ಈ ಸಂಬಂಧ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೊದಲ ಹಂತದಲ್ಲಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಆದ್ಯತೆ ನೀಡುವಂತೆ ಪ್ರಸ್ತಾಪ ಮಾಡುತ್ತೇನೆ ಎಂದಿದ್ದಾರೆ‌. ಇದೆ ವೇಳೆ ಬರ ಪರಿಹಾರದ ವಿಚಾರವಾಗಿ ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದು, ಕುಮಾರಸ್ವಾಮಿಗೆ ಏನು ಗೊತ್ತಿಲ್ಲ. 800 ಕೋಟಿ ಹಣ ಹೆಚ್ಚಿಗೆ ಇದೆ. ಅದನ್ನು ಬಿಡುಗಡೆ ಮಾಡಿದ್ದೇವೆ‌. ಕೇಂದ್ರದಿಂದ ಕೂಡ ಪರಿಹಾರ ಕೇಳಿದ್ದೇವೆ, ಆದರೆ ಆ ಕಡೆಯಿಂದ ಇನ್ನು ಬಿಡುಗಡೆಯಾಗಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆರ್ಟಿಕಲ್ 370 ರದ್ದತಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟ

  ಸುದ್ದಿಒನ್ : ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಕ್ರಮವನ್ನು ಕೇಂದ್ರ ಸರ್ಕಾರವು 2019 ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್

370 ನೇ ವಿಧಿ : ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು :  ಕಾಶ್ಮೀರದಲ್ಲಿ ಬಿಗಿ ಭದ್ರತೆ

  ಸುದ್ದಿಒನ್ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುತ್ತಿದ್ದ 370 ನೇ ವಿಧಿಯನ್ನು ರದ್ದುಗೊಳಿಸಿ 4 ವರ್ಷಗಳು ಕಳೆದಿವೆ. ಆದರೆ, 370ನೇ ವಿಧಿ ರದ್ದತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ,

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ, ಈ ರಾಶಿಯವರಿಗೆ ಇಷ್ಟವಿಲ್ಲದ ಮದುವೆ, ಸೋಮವಾರ- ರಾಶಿ ಭವಿಷ್ಯ ಡಿಸೆಂಬರ್-11,2023 ಸೂರ್ಯೋದಯ: 06.31 AM, ಸೂರ್ಯಾಸ್ತ : 05.54 PM ಶಾಲಿವಾಹನ ಶಕೆ1944, ಶುಭಕೃತ ನಾಮ

error: Content is protected !!