ಬೆಂಗಳೂರು; ರಾಜ್ಯ ರಾಜಕಾರಣದಲ್ಲಿ ಸದ್ಯಕ್ಕೆ ಹನಿಟ್ರ್ಯಾಪ್ ಪ್ರಜರಣದ್ದೆ ಜೋರು ಸದ್ದು. ಅದರಲ್ಲೂ ಸಚಿವ ಕೆ.ಎನ್.ರಾಜಣ್ಣ ಹೆಸರು ಕೇಳಿ ಬಂದಿದೆ. ಈ ಸಂಬಂಧ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹೈಕಮಾಂಡ್ ವರೆಗೂ ಈ ಸುದ್ದಿ ತಲುಪಿದೆ. ಸಚಿವ ಸತೀಶ್ ಜಾರಕಿಹೊಳಿ ಅವರು ಕೂಡ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಬಂದಿದ್ದಾರೆ. ಹನಿಟ್ರ್ಯಾಪ್ ವಿಚಾರ ಕೂಡ ತಿಳಿಸಿರಬಹುದು ಎನ್ನಲಾಗಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೂಡ ದೆಹಲಿಗೆ ಹಿರಡಲು ರೆಡಿಯಾಗಿದ್ದಾರೆ. ಆದರೆ ಅದಕ್ಕೂ ಮುನ್ನ ಸಭೆಯೊಂದನ್ನ ನಡೆಸಿದ್ದಾರೆ.

ಇಂದು ಸಿಎಂ ಕಾವೇರಿ ನಿವಾಸದಲ್ಲಿ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಖಾಲಿ ಇರುವ ವಿಧಾನ ಪರಿಷತ್ ಸ್ಥಾನದ ಭರ್ತಿ ವಿಚಾರವನ್ನು ಹೈಕಮಾಂಡ್ ನಾಯಕರ ಮುಂದೆ ಇಡಬೇಕು ಎಂಬ ವಿಚಾರದ ಬಗ್ಗೆಯೂ ಚರ್ಚೆಯಾಗಿದೆ. ಏಪ್ರಿಲ್ 2 ರಂದು ದೆಹಲಿಗೆ ಪ್ರವಾಸ ಮಾಡಲಿದ್ದಾರೆ. ದೆಹಲಿಗೆ ಹೋಗುವುದಕ್ಕೂ ಮುನ್ನವೇ ರಾಜಣ್ಣ ಹನಿಟ್ರ್ಯಾಪ್ ಹಾಗೂ ರಾಜೇಂದ್ರ ಸುಪಾರಿ ಬಗ್ಗೆ ಗೃಹ ಸಚಿವ ಪರಮೇಶ್ವರ್ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷವೇ ಆಡಳಿತ ನಡೆಸುತ್ತಿರುವಾಗಲೇ ಹನಿಟ್ರ್ಯಾಪ್ ಪ್ರಕರಣ ನಡೆದಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಹೀಗಾಗಿ ಈ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ, ಏನಾಗಲಿದೆ ಎಂಬುದನ್ನು ನೋಡಬೇಕಿದೆ. ಸದ್ಯಕ್ಕೆ ದೂರು ದಾಖಲಿಸಿಕೊಂಡಿರುವ ಗೃಹ ಸಚಿವರು ತನಿಖೆ ನಡೆಸುತ್ತಿದ್ದಾರೆ. ತನಿಖಾಧಿಕಾರಿಗಳು ಮಾಹಿತಿಯನ್ನು ಕಲೆ ಹಾಕುತ್ತಿದ್ದು, ನೀಲಿ ರಾಣಿ ಯಾರೆಂಬ ಹುಡುಕಾಟ ನಡೆಸುತ್ತಿದ್ದಾರೆ.

