ಬೆಂಗಳೂರು.ಆಗಸ್ಟ್.19 : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಚಿವರು ಹಾಗೂ ತಿಪಟೂರು ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರು, ಸರಳ ಸಜ್ಜನ ರಾಜಕಾರಣಿ ಬಿ.ಸಿ ನಾಗೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಪೋಸ್ಟ್ ಮಾಡಿದ್ದು, ಮಾಜಿ ಸಚಿವ ಬಿ.ಸಿ ನಾಗೇಶ್ ಅವರು ಹಲವು ವರ್ಷಗಳಿಂದ ನನಗೆ ಪರಿಚಿತರು. ಶಿಕ್ಷಣ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದ ಒಬ್ಬ ಪ್ರಾಮಾಣಿಕ ವ್ಯಕ್ತಿಯಾಗಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಶಿಸ್ತನ್ನು ತರಲು ದೊಡ್ಡ ಪ್ರಯತ್ನ ಮಾಡಿದ್ದರು. ಅವರಿಗೆ ಎಲ್ಲಾ ರೀತಿಯ ಸರ್ಕಾರಿ ಗೌರವಗಳನ್ನು ಒದಗಿಸುತ್ತೇವೆ. ನೊಣವಿನಕೆರೆ ಮಠದ ಎಲ್ಲಾ ಕಾರ್ಯಕ್ರಮಗಳಲ್ಲೂ ನನ್ನೊಂದಿಗೆ ಪಾಲ್ಗೊಂಡು, ನಮಗೆ ಸಹಕರಿಸಿದ್ದರು.
ಈ ದುಃಖದ ಸಂದರ್ಭದಲ್ಲಿ ಕುಟುಂಬಸ್ಥರು ಯಾರೂ ಧೈರ್ಯವನ್ನು ಕಳೆದುಕೊಳ್ಳಬಾರದು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ, ಬಂಧುಗಳಿಗೆ, ಅನುಯಾಯಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಮಾಜಿ ಸಚಿವರು ಹಾಗೂ ತಿಪಟೂರು ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರು, ಸರಳ ಸಜ್ಜನ ರಾಜಕಾರಣಿ ಶ್ರೀ ಬಿ.ಸಿ ನಾಗೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಲಾಯಿತು.
ಶ್ರೀ ಬಿ.ಸಿ ನಾಗೇಶ್ ಅವರು ಹಲವು ವರ್ಷಗಳಿಂದ ನನಗೆ ಪರಿಚಿತರು. ಶಿಕ್ಷಣ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದ ಒಬ್ಬ ಪ್ರಾಮಾಣಿಕ… pic.twitter.com/PvsiyaQ45R
— DK Shivakumar (@DKShivakumar) August 19, 2026











