Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಧಿಕಾರಿಯ ಮೇಲೆ ಸಿಎಂ ಗರಂ ಘಟನೆ ; ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು..?

---Advertisement---

ಮೈಸೂರು; ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಘಟನೆಯೊಂದು ನಡೆದಿತ್ತು. ಕಾರ್ಯಕ್ರಮದಲ್ಲಿ ವ್ಯವಸ್ಥೆ ಸರಿಯಾಗಿ ಇಲ್ಲದ ಕಾರಣ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಯನ್ನ ಜೋರಾಗಿ ಕೇಳಿದ ಪ್ರಸಂಗ ನಡೆದಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಈ ಸಂಬಂಧ ವಿರೋಧ ಪಕ್ಷದ ನಾಯಕರು ವಾಗ್ದಾಳಿಯನ್ನು ನಡೆಸಿದ್ದರು. ಇದೀಗ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಆ ಘಟನೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಆ ಸಮಯದಲ್ಲಿ ರೇಗಿದ್ದನ್ನು ಸಮರ್ಥಿಸಿಕೊಂಡ ಯತೀಂದ್ರ ಅವರು, ಅದು‌ ಕಾಂಗ್ರೆಸ್ ಕಾರ್ಯಕ್ರಮವಾಗಿತ್ತು. ಬಿಜೆಪಿ ನಾಯಕರು ಹೇಗೆ ನುಸುಳಿದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ವರನ್ನು ಕೇಳಿ, ಕೋಪದಿಂದ ಕೈ ಎತ್ತಿದ್ದು‌ ನಿಜ. ಆದರೆ ನಮ್ನ ತಂದೆಯವರು ಯಾವತ್ತಿಗೂ ಅಧಿಕಾರಿಗಳ ವಿರುದ್ಧ ಕೈ ಎತ್ತಿಲ್ಲ ಎಂದಿದ್ದಾರೆ.

ಅಲ್ಲಿ ಕರ್ತವ್ಯ ಲೋಪವಾಗಿದೆ. ಹೀಗಾಗಿ ಅದನ್ನ ಪ್ರಶ್ನೆ ಮಾಡುವಂತ ಸಂದರ್ಭದಲ್ಲಿ ಸಿಎಂ ಕೇಳಿದ್ದಾರೆ. ಆದರೆ ಯಾವತ್ತು ಕೂಡ ಅವರು ಯಾವ ಅಧಿಕಾರಿಯ ಜೊತೆಗೂ ಆ ರೀತಿ ನಡೆದುಕೊಳ್ಳುವುದಿಲ್ಲ ಎಂದೇ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಪೊಲೀಸ್ ಅಧಿಕಾರಿಯ ಮೇಲೆ ಕೈ ಮಾಡಲು ಹೋದ ಘಟನೆಯನ್ನ ಬಿಜೆಪಿ ನಾಯಕರು ಖಂಡಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಬಿಜೆಪಿಯವರು ಏನು ಬೇಕಾದವರು ಹೇಳಿಕೊಳ್ಳಲಿ. ನಾನು ಯಾಕೆ ರಾಜೀನಾಮೆ ಕೊಡಲಿ. ನಾನು ಹೇಳಬೇಕಾದದ್ದನ್ನ ಹೇಳಿ ಆಗಿದೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ನಾನು ರಾಜೀನಾಮೆ ನೀಡಲ್ಲ ಅಂತಾನೇ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...