Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

SC ಒಳಮೀಸಲಾತಿ ಜಾರಿ ಸಮಸ್ಯೆ ಪರಿಹಾರಕ್ಕೆ ಸಿಎಂ ನೇತೃತ್ವದಲ್ಲಿ ಸಭೆ

---Advertisement---

ಬೆಂಗಳೂರು: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ವರ್ಷಗಳ ಹೋರಾಟ ನಡೆದಿತ್ತು. ಸದ್ಯ ಒಳ ಮೀಸಲಾತಿ ಸಿಕ್ಕಿದೆ. ಆದರೆ ಒಂದಷ್ಟು ಸಮಸ್ಯೆಗಳು ಇದಾವೆ. ಅಂದ್ರೆ ರಾಜ್ಯ ಸರ್ಕಾರ ಪರಿಶಿಷ್ ಜಾತಿಯ ಎಲ್ಲಾ 101 ಜಾತಿಗಳಿಗೂ ಶೇಕಡ 17 ರಷ್ಟು ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೆ ಮಾಡಿದೆ. ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಹಂಚಿಕೆಯಾಗಿದೆ. ಆದರೆ ಒಳ ಮೀಸಲಾತಿಯ ಬಗ್ಗೆ ಕ್ಯಾಬಿನೆಟ್ ತೆಗೆದುಕೊಂಡ ತೀರ್ಮಾನವನ್ನು ಜಾರಿ ಮಾಡುವಾಗ ಕೆಲ ಸಮಸ್ಯೆಗಳು ಎದುರಾಗಿದ್ದವು.

ಹೀಗಾಗಿಯೇ ಈ ಸಮಸ್ಯೆಗಳ ಪರಿಹಾರಕ್ಕೆ ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ. ಈಗಾಗಲೇ ಒಳ ಮೀಸಲಾತಿಯ ರೋಸ್ಟರ್ ಬಿಂದುವನ್ನು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಈಗ ಯಾವುದೇ ಜಾತಿಗಳಿಗೂ ಹಂಚಿಕೆಯಾಗಿರುವ ರೋಸ್ಟರ್ ನಲ್ಲಿ ಅನ್ಯಾಯವಾಗದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ. ಯಾವುದೇ ಜಾತಿಗಳಿಗೂ ರೋಸ್ಟರ್ ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆಯನ್ನ ಸಭೆಯಲ್ಲಿ ನೀಡಿದ್ದಾರೆ.

ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದ್ದಾರೆ. ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಬಂಧಿರುವ ಸಮಸ್ಯೆಗಳಿಗೆ ಪರಿಹಾರ ನೀಡುವ ಕೆಲಸವನ್ನ ಇಂದು ಸಿದ್ದರಾಮಯ್ಯ ಅವರು ತೆಗೆದುಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now