ಬೆಂಗಳೂರು: ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿಗಳ ಸಭೆ ಆರಂಭವಾಗಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬಸವರಾಜ ಬೊಮ್ಮಯಿ ಸಭೆ ನಡೆಸುತ್ತಿದ್ದಾರೆ. ಕರಾವಳಿ, ಮಳೆನಾಡಿನಲ್ಲಿ ಬಾರಿ ಮಳೆಯಿಂದ ಹಾನಿಯಾಗಿದೆ. ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಈ ಸಭೆಯಲ್ಲಿ ಸಿಎಂ ಬೊಮ್ಮಾಯಿ ಮಾಹಿತಿ ಪಡೆಯಲಿದ್ದಾರೆ.
ಹಾನಿ ಆದವರಿಗೆ ಪರಿಹಾರ ಕ್ರಮಗಳು ತ್ವರಿತಗತಿಯಲ್ಲಿ ಮಾಡುವಂತೆ ಸಿಎಂ ಬೊಮ್ಮಯಿ ಸೂಚನೆ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿ ಕುರಿತು 13 ಜಿಲ್ಲೆಗಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದಾರೆ.
ಸಭೆಯಲ್ಲಿ ಸಚಿವರಾದ ಗೋವಿಂದ ಎಂ. ಕಾರಜೋಳ, ವಿ.ಸೋಮಣ್ಣ, ಎಸ್.ಟಿ. ಸೋಮಶೇಖರ್, ಗೋಪಾಲಯ್ಯ, ಸುನಿಲ್ ಕುಮಾರ್, ನಾರಾಯಣಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಭಿವೃದ್ಧಿ ಆಯುಕ್ತರು ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ, ಆರ್ ಡಿ ಪಿ ಆರ್ ಇಲಾಖೆ ಎಸಿಎಸ್ ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.