ಬೆಂಗಳೂರು: ಮಧ್ಯಾಹ್ನ ಒಂದುವರೆಗೆ ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಅತಿ ಹೆಚ್ಚು ಮಳೆ ಆಗಿ ಹಾನಿಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಚರ್ಚಿಸಲಿದ್ದಾರೆ. ದೇವನಹಳ್ಳಿ ರೆಸಾರ್ಟ್ ಯಿಂದಲೇ ವಿಡಿಯೋ ಕಾನ್ಫರೆನ್ಸ್ ನಡೆಸಲಿರುವ ಸಿಎಂ ಬಸವರಾಜ ಬೊಮ್ಮಯಿ.
ಎರಡು ದಿನಗಳ ಹಿಂದೆ ಉಡುಪಿ, ಕೊಡುಗು,ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸ ಮಾಡಿ ಬಂದಿದ್ದರು ಸಿಎಂ ಬೊಮ್ಮಾಯಿ ಅವರು. ಹಲವು ಜಿಲ್ಲೆಗಳಲ್ಲಿ ಮುಂದುವರೆದ ವರುಣನ ಆರ್ಭಟ ಹಿನ್ನೆಲೆ, ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಪರಿಸ್ಥಿತಿ ಬಗ್ಗೆ ತಿಳಿದುಕೊಳ್ಳಲಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ,
ಚಿಕ್ಕಬಳ್ಳಾಪುರ, ಹಾಸನ, ಬೀದರ, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ, ಬಳ್ಳಾರಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಜಿಲ್ಲಾಧಿಕಾರಿ, ಸಿಎಒ, ಎಸ್ಪಿಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದು, ಸಭೆಯಲ್ಲಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತು ಹಾನಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಂಬಂಧಿಸಿದ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಭಾಗಿಯಾಗಲಿದ್ದಾರೆ.