Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮೈಸೂರು ಪೇಟ ತೊಡಿಸಿ ಪ್ರಧಾನಿ‌ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

---Advertisement---

 

ಇಂದು ಸಿಎಂ ಸಿದ್ದರಾಮಯ್ಯ ಅವರ 76ನೇ ವರ್ಷದ ಹುಟ್ಟುಹಬ್ಬ. ಅಭಿಮಾನಿಗಳೆಲ್ಲಾ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಜ್ಯದಲ್ಲಿ ಎಲ್ಲೆಡೆ ಅವರ ಹುಟ್ಟುಹಬ್ಬದ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ಇದರ ಜೊತೆಗೆ ಇಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ‌ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಸಂಸತ್ ಭವನದಲ್ಲಿ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ರಾಜ್ಯದ ಅಭಿವೃದ್ಧಿ, ಅನುದಾನದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ವೇಳೆ ಮೈಸೂರು ಪೇಟ‌ ಧರಿಸಿ, ಪ್ರಧಾನಿ ಅವರಿಗೆ ಸ್ಪೆಷಲ್ ಉಡುಗೊರೆಯನ್ನು ನೀಡಿದ್ದಾರೆ. ಇಂದು ಸಿದ್ದರಾಮಯ್ಯ ಅವರ ಹುಟ್ಟುಹಬ್ಬವಾದ ಹಿನ್ನೆಲೆ, ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ಅವರಿಗೆ ಶುಭಕೋರಿದ್ದಾರೆ.

ಅನ್ನಭಾಗ್ಯಕ್ಕೆ ಅಕ್ಕಿ, ರಾಜ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ, ನೀರಾವರು ಯೋಜನೆಗಳಿಗೆ ಅನುದಾನ, ನರೇಗಾ ಯೋಜನೆಗೆ ಹೆಚ್ಚಿನ ಹಣಕಾಸು ನೀಡುವಂತೆ ಕೋರಿದ್ದಾರೆ. ಬಳಿಕ ರಾಜನಾಥ್ ಸಿಂಗ್, ನಿರ್ಮಲ ಸೀತರಾಮನ್, ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಅಭಿವೃದ್ಧಿಗಳ ವಿಚಾರವಾಗಿ ಚರ್ಚೆ ಮಾಡಲಾಗುತ್ತದೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...