ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ವಿಚಾರಕ್ಕೆ ಗುದ್ದಾಟ ನಡೆಯುತ್ತಲೇ ಇರುತ್ತದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ನಡುವೆ ಈ ಯುದ್ಧ ಸರ್ವೆ ಸಾಮಾನ್ಯವಾಗಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ನ ಮುಂದಿನ ಸಿಎಂ ವಿಚಾರ ಮುನ್ನೆಲೆಗೆ ಬಂದಿದೆ.
ನಿನ್ನೆ ಒಕ್ಕಲಿಗರ ಸಮುದಾಯದ ಮೀಸಲಾತಿ ಸಭೆ ನಡೆದಿದೆ. ಈ ಸಭೆಯಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಮೀಸಲಾತಿಗಾಗಿ ಒಗ್ಗಟ್ಟಿನ ಹೋರಾಟ ಮಾಡೋಣಾ. ನಾನು ಜೈಲಿಗೆ ಹೋಗಿದ್ದಾಗಲೂ ನೀವೂ ಜೊತೆಗೆ ನಿಂತಿದ್ರಿ. ಮುಂದಿನ ಚುನಾವಣೆಯಲ್ಲಿ ಅಧಿಕಾರ ಕೊಡೋದು ಬಿಡೋದು ಸಮುದಾಯಕ್ಕೆ ಬಿಟ್ಟಿದ್ದು. ಆದರೆ ಎಲ್ಲರೂ ಒಗ್ಗಟ್ಟಾಗಿ ಮೀಸಲಾತಿಗಾಗಿ ಹೋರಾಡೋಣಾ ಎಂದು ಹೇಳುವ ಮೂಲಕ ಸಿಎಂ ಆಗುವ ಮಹತ್ವಕಾಂಕ್ಷೆಯನ್ನು ವ್ಯಕ್ತಪಡಿಸಿದರು.
ಇದಾದ ಬಳಿಕ ಸಿದ್ದರಾಮಯ್ಯ ಬೆಂಬಲಿಗರು ಶುರು ಮಾಡಿಕೊಂಡಿದ್ದಾರೆ. ನಮ್ಮ ನಾಯಕರೇ ಸಿಎಂ ಆಗಬೇಕೆಂದು ಕೊಂಡರು. ಬಳಿಕ ಆ ಆಸೆಯನ್ನು ಕನಕ ಜಯಂತಿಯಲ್ಲಿ ಹೊರ ಹಾಕಿದ್ದಾರೆ. ಕೂಸು ಹುಟ್ಟುವುದಕ್ಕೂ ಮುನ್ನವೇ ಕುವಾಲಿ ಹೊಲೆಸಿದಂತೆ ಆಡುತ್ತಿದ್ದಾರೆ ಕಾಂಗ್ರೆಸ್ ನಾಯಕರು.