Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಳನೇ ವೇತನ, ಹಳೇ ಪಿಂಚಣಿ ಜಾರಿಗೆ ಸಿಎಂ ಸಿದ್ಧತೆ : ಮಾಜಿ ಸಚಿವ ಎಚ್.ಆಂಜನೇಯ

Facebook
Twitter
Telegram
WhatsApp

ಚಿತ್ರದುರ್ಗ ಮೇ 31:  ಸರ್ಕಾರಿ ನೌಕರರು, ಶಿಕ್ಷಕರ ವರ್ಗ ಕಾಯಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಹೊಳಲ್ಕೆರೆ ಕ್ಷೇತ್ರದ ಚಿತ್ರಹಳ್ಳಿ, ಕಣಿವೆ, ಬೊಮ್ಮನಕಟ್ಟೆ, ಬಸಾಪುರ, ಬಿ.ದುರ್ಗ, ಕೋಡಿರಂಗವ್ವನಹಳ್ಳಿ ಸೇರಿ ವಿವಿಧ ವಸತಿ ಹಾಗೂ ಖಾಸಗಿ ಶಾಲೆಗಳಲ್ಲಿ ಶುಕ್ರವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ ಮತಯಾಚಿಸಿ ಮಾತನಾಡಿದರು.

ಮಾಜಿ ಸಚಿವ, ರಾಜ್ಯದ ಹಿರಿಯ ನಾಯಕ ದಿವಂಗತ ಎ.ಕೃಷ್ಣಪ್ಪ ಅವರ ಕುಟುಂಬದ ಸದಸ್ಯ ಡಿ.ಟಿ.ಶ್ರೀನಿವಾಸ್ ಅನೇಕ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಶಿಕ್ಷಕರ ಕಷ್ಟ, ಸಮಸ್ಯೆಗಳ ಅರಿವು ಇದೆ. ಆದ್ದರಿಂದ ಅವರ ಗೆಲುವು ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ರಹದಾರಿ ಆಗಲಿದೆ ಎಂದರು.

ಶಿಕ್ಷಕರ ಬೇಡಿಕೆ ಈಡೇರಿಕೆಗೆ ಹಾಗೂ ಸರ್ಕಾರಿ ನೌಕರರ ಹಿತಕ್ಕೆ ಬದ್ಧವಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಗಾಗಲೇ 7ನೇ ವೇತನ ಆಯೋಗದ ವರದಿ ಜಾರಿಗೆ ಸಿದ್ಧತೆ ನಡೆಸಿದೆ. ಈ ಸಂದರ್ಭ ಸರ್ಕಾರಕ್ಕೆ ವಿಧಾನಸಭೆ ರೀತಿ ವಿಧಾನ ಪರಿಷತ್‍ನಲ್ಲೂ ಬಲ ಬೇಕಿದ್ದು, ಡಿ.ಟಿ.ಶ್ರೀನಿವಾಸ್ ಗೆಲುವು ಶಿಕ್ಷಕರ ಬೇಡಿಕೆ ಈಡೇರಿಕೆಗೆ ಹೆಚ್ಚು ಸಹಕಾರಿ ಆಗಲಿದೆ ಎಂದು ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಈಗಾಗಲೇ ಸೋತು ಸುಣ್ಣವಾಗಿರುವ ಬಿಜೆಪಿಗೆ ವಿಧಾನಪರಿಷತ್ ಚುನಾವಣೆಯಲ್ಲೂ ಸೋಲಿನ ಮುನ್ಸೂಚನೆ ದೊರೆತಿರುವ ಕಾರಣಕ್ಕೆ ವಾಮ ಮಾರ್ಗದಲ್ಲಿ ಸಾಗುತ್ತಿದ್ದು, ಈ ಮೂಲಕ ಶಿಕ್ಷಕ ಕ್ಷೇತ್ರದ ಪಾವಿತ್ರೃಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದೆ ಎಂದು ದೂರಿದರು.

ಮೂರು ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರ ಸಾಧನೆ ಶೂನ್ಯವಾಗಿದ್ದು, ಈಗಾಗಲೇ ಬಹಳಷ್ಟು ಶಿಕ್ಷಕರು ಭ್ರಮನಿರಸನಗೊಂಡು ಸ್ವಯಂ ಪ್ರೇರಿತರಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಟೊಂಕ ಕಟ್ಟಿರುವುದು ವಿಜಯದ ಮುನ್ಸೂಚನೆ ಎಂದರು.

ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರ ಬಲವರ್ಧನೆಗೆ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಶಿಕ್ಷಕರ ನೇಮಕಾತಿ, ವೇತನ ಹೆಚ್ಚಳ, ಶಾಲಾ-ಕೊಠಡಿಗಳ ನಿರ್ಮಾಣ, ಶೌಚಗೃಹ ವ್ಯವಸ್ಥೆ ಹೀಗೆ ಅನೇಕ ಯೋಜನೆಗಳ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆ. ಇನ್ನೂ ಹೆಚ್ಚಿನ ರೀತಿ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡಲು, ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ವಿದ್ಯಾವಂತ ಡಿ.ಟಿ.ಶ್ರೀನಿವಾಸ್ ಅವರ ಗೆಲುವು ಅಗತ್ಯವಾಗಿದೆ ಎಂದು ಹೇಳಿದರು.

ಉನ್ನತ ವ್ಯಾಸಂಗ ಮಾಡಿರುವ ಡಿ.ಟಿ.ಶ್ರೀನಿವಾಸ್, ರಾಜಕೀಯ ಕುಟುಂಬದ ಹಿನ್ನೆಲೆ ಹೊಂದಿರುವ ಯುವ ರಾಜಕಾರಣಿ. ಈ ಕ್ಷೇತ್ರದ ಮೂಲಕ ಶಿಕ್ಷಕರು, ಪದವೀಧರ ಯುವಕರಿಗೆ ಅನುಕೂಲ ಮಾಡಿಕೊಡಲು ಯೋಜನೆ ರೂಪಿಸಿದ್ದು, ಪ್ರಜ್ಞಾವಂತ ಶಿಕ್ಷಕರು ಪ್ರಥಮ ಪ್ರಾಶಸ್ತ್ಯ ಮತ ನೀಡುವ ಮೂಲಕ ಅವುಗಳ ಅನುಷ್ಠಾನಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಕೋರಿದರು.

ಚಿಂತಕರ ಚಾವಡಿ ಎಂದೇ ಹೆಸರು ಮಾಡಿರುವ ವಿಧಾನಪರಿಷತ್‍ಗೆ ವಿದ್ಯಾವಂತರು, ಶಿಕ್ಷಣದ ಬೆಳವಣಿಗೆ ಕುರಿತು ಕಾಳಜಿ ಹೊಂದಿರುವ ಹಾಗೂ ಶಿಕ್ಷಣ ಇಲಾಖೆಯ ಸಮಸ್ಯೆಗಳ ಬಗ್ಗೆ ಸಮಗ್ರ ಅರಿವನ್ನು ಹೊಂದಿರುವ ಶ್ರೀನಿವಾಸ್ ಅವರಂತಹವರು ಸದನ ಪ್ರವೇಶಿಸುವುದು ಅಗತ್ಯವಾಗಿದೆ ಎಂದರು.

ನುಡಿದಂತೆ ನಡೆಯುವ ಖ್ಯಾತಿಗಳಿಸಿರುವ ಕಾಂಗ್ರೆಸ್ ಸರ್ಕಾರ, ಹಳೇ ಪಿಂಚಣಿ ಜೊತೆಗೆ ಅನೇಕ ಜನಪರ, ಶಿಕ್ಷಕರು, ನೌಕರರ ಪರ ಕಾರ್ಯಕ್ರಮ ರೂಪಿಸಿದೆ. ಇವುಗಳ ಅನುಷ್ಠಾನಕ್ಕೆ ಮೇಲ್ಮನೆಯಲ್ಲಿ ಬಿಜೆಪಿ ಅಡ್ಡಿಪಡಿಸುವ ಸಾಧ್ಯತೆ ಇದ್ದು, ಅವರ ಧ್ವನಿ ಅಡಗಿಸಿ ಜನಪರ ಧ್ವನಿಯಾಗಲು ಡಿ.ಟಿ.ಶ್ರೀನಿವಾಸ್ ಗೆಲ್ಲಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಹನುಮಂತಪ್ಪ, ಜಿಪಂ ಮಾಜಿ ಅಧ್ಯಕ್ಷ ಶಿವಕುಮಾರ್ ಶಿವಪುರ, ಮಾಜಿ ಉಪಾಧ್ಯಕ್ಷ ಗಂಗಾಧರ್, ಸದಸ್ಯರಾದ ರಂಗಸ್ವಾಮಿ, ಡಿ.ಕೆ.ಶಿವಮೂರ್ತಿ, ಇಂದಿರಾ ಕಿರಣ್‍ಕುಮಾರ್ ಯಾದವ್, ಒಬಿಸಿ ರಾಜ್ಯ ಉಪಾಧ್ಯಕ್ಷ ಕಿರಣ್‍ಕುಮಾರ್ ಯಾದವ್, ಚಿತ್ರಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಕಾಟಲಿಂಗಪ್ಪ, ಪ್ರಾಚಾರ್ಯ ಮಹೇಶ್ ಅಂಗಡಿ, ಸಹ ಶಿಕ್ಷಕರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ವೃಕ್ಷ ಅಭಿಯಾನ : ಪ್ರಸಕ್ತ ವರ್ಷದಲ್ಲಿ ಐವತ್ತು ಸಾವಿರ ಗಿಡಗಳನ್ನು ನೆಡಲಾಗುವುದು : ದೇನಾ ಭಗತ್ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ:  ಕೋಟಿ ವೃಕ್ಷ ಅಭಿಯಾನದಡಿ ಔಷಧಿ ಹಾಗೂ ಪ್ರಾಣಿ ಪಕ್ಷಿಗಳಿಗೆ ಜಾನುವಾರುಗಳಿಗೆ ಉಪಯೋಗವಾಗುವಂತಹ ಗಿಡಗಳನ್ನು ಬೆಳೆಸಲಾಗುತ್ತದೆ.

ಬಿಟ್ಟಿ ಭಾಗ್ಯ ಕೊಡಲಿಕ್ಕೆ ವಾಲ್ಮೀಕಿ ನಿಗಮದ ದುಡ್ಡೇ ಬೇಕಿತ್ತಾ ? ಸಿಎಂ ವಿರುದ್ಧ ಮಾಜಿ ಶಾಸಕ ತಿಪ್ಪೇಸ್ವಾಮಿ ವಾಗ್ದಾಳಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಚಳ್ಳಕೆರೆ, ಜುಲೈ. 03 :  ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಬಿಟ್ಟಿಭಾಗ್ಯಗಳನ್ನು ಕೊಟ್ಟು ಖಜಾನೆ ಖಾಲಿ ಮಾಡಿಕೊಂಡಿದೆ. ಸಿದ್ದರಾಮಯ್ಯನವರೇ ಬಿಟ್ಟಿ

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಜಾಗೃತಿ ಮೂಡಿಸಿ : ಪಿಡಿಒಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್

ಚಿತ್ರದುರ್ಗ. ಜುಲೈ.03:  ಮಳೆಗಾಲ ಆರಂಭವಾಗಿದ್ದು, ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ಗಂಭೀರ ಸ್ವರೂಪದ ಪರಿಣಾಮಗಳು ಬೀರುವ ಸಾಧ್ಯತೆಗಳಿರುವುದರಿಂದ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಾಗೃತಿ ಮೂಡಿಸುವ ಕೆಲಸ

error: Content is protected !!